janadhvani

Kannada Online News Paper

ಮಂಗಳೂರು: ಕರ್ನಾಟಕ ಮುಸ್ಲಿಮರಲ್ಲಿ ಭರವಸೆಯ ಚಿಲುಮೆ ಸೃಷ್ಟಿಸಿದ ಕರ್ನಾಟಕ ಮುಸ್ಲಿಂ ಜಮಾಅತ್ ದ‌.ಕ ಜಿಲ್ಲಾ ಸಮಿತಿಯು ಜುಲೈ 5 ರಂದು ಅಸ್ತಿತ್ವಕ್ಕೆ ಬರಲಿದೆ.ಮುಸ್ಲಿಮರ ಧಾರ್ಮಿಕ, ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಒಳಗೊಂಡ ಸರ್ವತೋಮುಖ ಅಭಿವೃದ್ಧಿಯನ್ನು ಗುರಿಯಾಗಿರಿಸಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಈಗಾಗಲೇ ಕಾರ್ಯಾಚರಿಸುತ್ತಿರುವ ಸಂಘಟನೆಯ ಜಿಲ್ಲಾ ಸಮಿತಿಯು ದಿನಾಂಕ 5 ಶುಕ್ರವಾರ ಸಂಜೆ 4 ಗಂಟೆಗೆ ಪಾಣೆಮಂಗಳೂರು ಸಾಗರ್ ಅಡಿಟೋರಿಯಂನಲ್ಲಿ ನಡೆಯಲಿದೆ. ಸದ್ರಿ ಸಭೆಯಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಹ್ವಾನಿತ ಆಯ್ದ 300 ಮಂದಿ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ.ಕಾರ್ಯಕ್ರಮದಲ್ಲಿ ಯೆನಪೋಯ ವಿಶ್ವ ವಿದ್ಯಾನಿಲಯದ ಕುಲಾಧಿಪತಿ ಅಲ್ಹಾಜ್ ಯೆನಪೋಯ ಅಬ್ದುಲ್ಲ ಕುಂಞಿಯವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ಬಡದ ಸಂಯುಕ್ತ ಖಾಝಿ ಅಸ್ಸಯ್ಯಿದ್ ಫಝಲ್ ಕೋಯಮ್ಮ ತಂಙಳ್ ಕೂರ ದುವಾಗೆ ನೇತೃತ್ವ ನೀಡಲಿದ್ದಾರೆ.ಉಡುಪಿ ಸಂಯುಕ್ತ ಖಾಝಿ ಶೈಖುನಾ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್, ವಿಧಾನ ಪರಿಷತ್ ಸದಸ್ಯರಾದ ಅಲ್ಹಾಜ್ ಬಿ.ಎಂ ಫಾರೂಕ್, ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಾದ ಅಲ್ಹಾಜ್ ಕಣಚೂರು ಮೋನು ಮುಂತಾದವರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಮುಸ್ಲಿಂ ಜಮಾಅತ್ ಪ್ರಧಾನ ಕಾರ್ಯದರ್ಶಿ ಎನ್.ಕೆ.ಎಂ ಶಾಫಿ ಸ ಅದಿ ಹಾಗೂ ಜಿಲ್ಲಾ ಸಂಯೋಜಕ ಹಾಜಿ ಮುಮ್ತಾಝ್ ಅಲಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

error: Content is protected !! Not allowed copy content from janadhvani.com