ಶಾಸಕರ ರಾಜೀನಾಮೆ: ವೇಣುಗೋಪಾಲ್ ಆಗಮನ- ಸರ್ಕಾರ ಉಳಿಸಿಕೊಳ್ಳಲು ಮಹತ್ವದ ಸಭೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಶಾಸಕರ ರಾಜೀನಾಮೆ ಬಹುದೊಡ್ಡ ಸಂಚಲನವನ್ನೇ ಸೃಷ್ಟಿಸಿದೆ. ರಾಜ್ಯ ರಾಜಕೀಯ ಬಿಕ್ಕಟ್ಟು ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದು, ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರು ಕೆಂಡಾಮಂಡಲರಾಗಿದ್ದಾರೆ.

ಇನ್ನು ರಾಜ್ಯದ ಸೃಷ್ಟಿಯಾಗಿರುವ ಬಿಕ್ಕಟ್ಟು ಶಮನಕ್ಕೆ ಪಕ್ಷದ ಮುಖಂಡರು ಮುಂದಾಗಿದ್ದು, ಸಭೆ ಮೇಲೆ ಸಭೆ ನಡೆಸುತ್ತಿದ್ದಾರೆ. ಅದಕ್ಕಾಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಬೆಂಗಳೂರಿಗೆ ಆಗಮಿಸಿದ್ದಾರೆ.

ಸಿದ್ದರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಕೆ.ಸಿ.ವೇಣುಗೋಪಾಲ್ ಆಗಮಿಸಿದ್ದಾರೆ. ಇವರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕೂಡ ಬಂದಿದ್ದಾರೆ. ಈಗಾಗಲೇ ಸಿದ್ದರಾಮಯ್ಯ ನಿವಾಸದಲ್ಲಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಡಿ.ಕೆ.ಶಿವಕುಮಾರ್ ಇದ್ದು, ಸರ್ಕಾರ ಉಳಿಸಿಕೊಳ್ಳಲು ಸಕಲ ಕಸರತ್ತು ನಡೆಸಿದ್ದಾರೆ.

ವೇಣುಗೋಪಾಲ್ ನೇತೃತ್ವದಲ್ಲಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ನಾಯಕರು ಚರ್ಚೆ ನಡೆಸುತ್ತಿದ್ದಾರೆ. ಈಗಾಗಲೇ ರಾಜೀನಾಮೆ ನೀಡಿರುವ ಶಾಸಕರು ಗೋವಾಕ್ಕೆ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದಾರೆ. ಈಗ ಅವರನ್ನು ಸಂಪರ್ಕಿಸುವುದು ಹೇಗೆ? ಅವರ ಮನವೊಲಿಸುವುದು ಹೇಗೆ? ಒಂದು ವೇಳೆ ಅದು ಸಾಧ್ಯವಾಗದೆ ಇದ್ದರೆ ರಿವರ್ಸ್ ಆಪರೇಷನ್ ಮಾಡಿ ಬಿಜೆಪಿ ಶಾಸಕರ ರಾಜೀನಾಮೆ ಕೊಡಿಸುವುದೇ ಎಂಬೆಲ್ಲಾ ವಿಚಾರಗಳ ಕುರಿತು ನಾಯಕರು ಚರ್ಚೆ ನಡೆಸಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!