ಇಂದು: ಎಸ್ಸೆಸ್ಸೆಫ್ ಮುಡಿಪು ಡಿವಿಷನಿಂದ ಪೇರೆಂಟ್ಸ್ ಕ್ವಾಂಕ್ಲೇವ್

ಮಡಿಪು:ಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಸಮಿತಿ ವಿಸ್ಡಂ ಟೀಮ್ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಲ್ಲಿ ಎಜ್ಯು ಸಮ್ಮಿಟ್ ಎಂಬ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು,ಅದರ ಭಾಗವಾಗಿ ರಾಜ್ಯದ ಎಲ್ಲಾ ಡಿವಿಷನ್ ಗಳಲ್ಲಿ ಮಕ್ಕಳನ್ನು ಹೇಗೆ ಪೋಷಿಸುವುದು ಎಂಬ ವಿಷಯದಲ್ಲಿ ಪೇರೆಂಟ್ಸ್ ಕಾಂಕ್ಲೇವ್ ಕಾರ್ಯಕ್ರಮವನ್ನು ನಡೆಸಲು ನಿರ್ದೇಸಿದ್ದು.

ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ವತಿಯಿಂದ ಪೇರೆಂಟ್ಸ್ ಕಾಂಕ್ಲೇವ್ ಕಾರ್ಯಕ್ರಮವು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಅಧ್ಯಕ್ಷ ತೌಸೀಫ್ ಸ ಅದಿ ಹರೇಕಳರವರ ಅಧ್ಯಕ್ಷತೆಯಲ್ಲಿ ಜುಲೈ 14 ಆದಿತ್ಯವಾರ ಬೆಳಿಗ್ಗೆ 10:00 ಗಂಟೆಗೆ ಅಲ್- ಮದೀನಾ ಕ್ಯಾಂಪಸ್ ಮಂಜನಾಡಿಯಲ್ಲಿ ನಡೆಯಲಿರುವುದು.

ಎಸ್ಸೆಸ್ಸೆಪ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಕಾರ್ಯಕ್ರಮವನ್ನು ಉದ್ಘಾಟಿಸುವರು.

ಮನ್ಸೂರ್ ಹಿಮಮಿ ಮೊಂಟೆಪದವು ಹಾಗೂ ದ.ಕ ಜಿಲ್ಲಾ ನಾಯಕ ಇಬ್ರಾಹಿಂ ಅಹ್ಸನಿ ಮಂಜನಾಡಿ ರವರು ತರಗತಿಯನ್ನು ನಡೆಸಲಿರುವರು ಎಂದು ಎಸ್ಸೆಸ್ಸೆಫ್ ಮುಡಿಪು ಡಿವಿಷನ್ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಪೊಟ್ಟೊಳಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!