ದುಬೈ: ದುಬೈ ಪೊಲೀಸರು ಕಳೆದ ವರ್ಷ 41,000 ನಿಷೇಧಿತ ವಸ್ತುಗಳನ್ನು ಸಂದರ್ಶಕರಿಂದ ವಶಪಡಿಸಿಕೊಂಡಿದ್ದಾರೆ. ಕಳೆದ ವರ್ಷ ದುಬೈ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ವಶಪಡಿಸಲಾಗಿದೆ ಎಂದು ದುಬೈ ಪೊಲೀಸ್ ವಿಮಾನ ನಿಲ್ದಾಣ ಭದ್ರತಾ ವಿಭಾಗದ ಉಪ ನಿರ್ದೇಶಕ ಬ್ರಿಗೇಡಿಯರ್ ಮುಹಮ್ಮದ್ ಅಹ್ಮದ್ ಬಿನ್ ದೈಲನ್ ಹೇಳಿದ್ದಾರೆ.
ವಶಪಡಿಸಿಕೊಂಡ ವಸ್ತುಗಳಲ್ಲಿ ನಿಷೇಧಿತ ದ್ರವ್ಯಗಳು, ಹರಿತವಾದ ಆಯುಧಗಳು, ಲೈಟರ್ಗಳು, ಸೂಜಿಗಳು ಮತ್ತು ಕತ್ತರಿ ಸೇರಿವೆ. ದುಬೈ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಕರು ಏನು ತರಬಹುದು ಮತ್ತು ಯಾವುದನ್ನು ತರಬಾರದು ಎಂಬ ಬಗ್ಗೆ ಅರಿವಿರಬೇಕು ಎಂದು ಪೊಲೀಸರು ತಿಳಿಸಿದ್ದಾರೆ.
ವಿಶ್ವದಲ್ಲೇ ಅತೀ ಹೆಚ್ಚು ಯಾತ್ರಿಕರು ತಲುಪುವ ವಿಮಾನ ನಿಲ್ದಾಣವಾಗಿದ್ದು, ಇಂತಹ ಪರಿಶೋಧನೆಯಿಂದ ಜನದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಪ್ರತಿ ತಿಂಗಳು, ಒಂದು ಕೋಟಿ ಪ್ರಯಾಣಿಕರು ದುಬೈ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸುತ್ತಾರೆ. ರಜಾದಿನಗಳಲ್ಲಿ ಈ ಅಂಕಿ ಅಂಶಗಳು ಮತ್ತೆ ಏರಿಕೆಯಾಗುತ್ತದೆ.
ಕಾರ್ಮಿಕ ಶಿಬಿರಗಳಲ್ಲಿ ಜಾಗೃತಿ ಅಭಿಯಾನ ನಡೆಸಲಾಗುತ್ತಿದ್ದು, ವಿಮಾನ ನಿಲ್ದಾಣದ ಮೂಲಕ ಸಾಗಿಸಲು ಅನುಮತಿಸಲಾದ ವಸ್ತುಗಳ ಮಾಹಿತಿಯನ್ನು ಒಳಗೊಂಡಿರುವ ಕರಪತ್ರಗಳು. ಭಾರತ, ಪಾಕಿಸ್ತಾನ, ಫಿಲಿಪೈನ್ಸ್ ಮತ್ತು ಬಾಂಗ್ಲಾದೇಶ ದೂತಾವಾಸಗಳು ಸಹಯೋಗದೊಂದಿಗೆ ಯೋಜನೆಗಳನ್ನು ಜಾರಿಗೊಳಿಸುತ್ತಿವೆ. 2018 ರಲ್ಲಿ ಭಾರತದಿಂದ 29 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ದುಬೈ ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದರು.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ