ಬೆಂಗಳೂರು (ಜುಲೈ.22); ಅತೃಪ್ತರ ರಾಜೀನಾಮೆ ಅಂಗೀಕಾರ ವಿಚಾರವಾಗಿ ಈವರೆಗೆ ಯಾವುದೇ ತೀರ್ಮಾನವಾಗದ ಕಾರಣ ಬಹುಮತ ಯಾಚನೆ ಎಂಬುದು ತ್ರಿಶಂಕು ಸ್ಥಿತಿಯಲ್ಲಿದೆ. ಹೀಗಾಗಿ ಇದಕ್ಕೆ ಸ್ಪೀಕರ್ ಶೀಘ್ರವಾಗಿ ಒಂದು ಪರಿಹಾರ ನೀಡಬೇಕು ಅಲ್ಲಿಯವರೆಗೆ ಬಹುಮತ ಯಾಚನೆಯನ್ನು ಮುಂದೂಡಬೇಕು ಎಂದು ಸಚಿವ ಕೃಷ್ಣಭೈರೇಗೌಡ ಮನವಿ ಮಾಡಿದ್ದಾರೆ.
ಸೋಮವಾರದ ಅಧಿವೇಶನದಲ್ಲಿ ತಮಿಳುನಾಡಿನಲ್ಲಿ 2017ರಲ್ಲಿ ಉಂಟಾದ ರಾಜಕೀಯ ಪ್ರಕ್ಷುಬ್ಧ ವಾತಾವರಣ ಹಾಗೂ 11 ಶಾಸಕರನ್ನು ಅನೂರ್ಜಿತಗೊಳಿಸಿದ ಸ್ಪೀಕರ್ ತೀರ್ಮಾನವನ್ನು ಉಲ್ಲೇಖಿಸಿ ಮಾತನಾಡಿದ ಕೃಷ್ಣಭೈರೇಗೌಡ, “2017ರಲ್ಲಿ ವಿಪ್ ಉಲ್ಲಂಘಿಸಿದ ಆಡಳಿತ ಪಕ್ಷದ 11 ಶಾಸಕರನ್ನು ಅಲ್ಲಿನ ಸ್ಪೀಕರ್ ಅನೂರ್ಜಿತಗೊಳಿಸಿದ್ದರು. ಸ್ಪೀಕರ್ ನಿರ್ಣಯವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು. ಇಂದು ರಾಜ್ಯದಲ್ಲೂ ಸಹ ಇಂತಹದ್ದೇ ಪರಿಸ್ಥಿತಿ ನಿರ್ಮಾಣವಾಗಿದೆ.
ಆಡಳಿತ ಮೈತ್ರಿ ಪಕ್ಷಗಳ 15ಕ್ಕೂ ಹೆಚ್ಚು ಶಾಸಕರು ಇಂದು ಆಪರೇಷನ್ ಕಮಲಕ್ಕೆ ಬಲಿಯಾಗಿ ಮುಂಬೈನಲ್ಲಿ ಕುಳಿತಿದ್ದಾರೆ. ಇವರೆಲ್ಲರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅಲ್ಲದೆ ಇವರ ವಿರುದ್ಧ ಮೈತ್ರಿ ಪಕ್ಷದ ನಾಯಕರು ವಿಪ್ ಉಲ್ಲಂಘನೆ ದೂರು ನೀಡಿದ್ದಾರೆ. ಸದನದಲ್ಲಿ ಇವರ ಹಾಜರಿ ಇಲ್ಲದೆ ಬಹುಮತ ಯಾಚನೆ ನಡೆಯುವುದು ಸರಿಯಲ್ಲ. ಹೀಗಾಗಿ ಸ್ಪೀಕರ್ ಮೊದಲು ಇವರ ರಾಜೀನಾಮೆ ಅರ್ಜಿಯ ಕುರಿತು ವಿಚಾರಣೆ ನಡೆಸಿ. ವಿಪ್ ಉಲ್ಲಂಘನೆ ಕುರಿತು ವಿಚಾರಣೆ ನಡೆಸಿ ಕ್ರಮ ಜರುಗಿಸಿ. ಈ ತ್ರಿಶಂಕು ಸ್ಥಿತಿಯನ್ನು ತೊಲಗಿಸಿ ನಂತರ ವಿಶ್ವಾಸಮತ ಯಾಚನೆಗೆ ಅವಕಾಶ ನೀಡಿ” ಎಂದು ಅವರು ಮನವಿ ಮಾಡಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ