ಬೆಂಗಳೂರು,ಜು.23-ಕಳೆದ ಎರಡು ವಾರಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಕ್ಕೆ ಇಂದು ತೆರೆಬಿದ್ದಿದ್ದು, ವಿಶ್ವಾಸಮತ ಯಾಚನೆಯಲ್ಲಿ ಆಡಳಿತ ಪಕ್ಷಕ್ಕೆ ಸೋಲುಂಟಾಗಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದರಿಂದ ಕಳೆದ 13 ತಿಂಗಳಿನಿಂದ ಅಸ್ತಿತ್ವದಲ್ಲಿದ್ದ ಕಾಂಗ್ರೆಸ್ – ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನಗೊಂಡಿದೆ.
ವಿಧಾನಸಭೆಯಲ್ಲಿ ನಡೆದ ಸುದೀರ್ಘ ಚರ್ಚೆ ಬಳಿಕ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಪ್ರಸ್ತಾವನೆಯನ್ನು ಮತದಾನಕ್ಕೆ ಕೋರಿದರು. ಬಳಿಕ ವಿಧಾನಸಭೆಯ ಪ್ರತಿಪಕ್ಷದ ನಾಯಕ ಬಿ. ಎಸ್. ಯಡಿಯೂರಪ್ಪ ಅವರು ಪ್ರತ್ಯೇಕವಾಗಿ ಮತಎಣಿಕೆ ನಡೆಸುವಂತೆ ಸ್ಪೀಕರ್ ಕೆ. ಆರ್. ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿದರು.
ನಂತರ ಸರತಿಯಂತೆ ಒಬ್ಬೊಬ್ಬ ಶಾಸಕರನ್ನು ಎಣಿಕೆ ಮಾಡಲಾಯಿತು. ವಿಶ್ವಾಸ ಮತ ಪ್ರಸ್ತಾವನೆಯ ಪರ 99 ಮತಗಳು ಹಾಗೂ ವಿರುದ್ಧವಾಗಿ 105 ಮತಗಳು ಬಂದವು. ಪ್ರಕ್ರಿಯೆ ಮುಗಿದ ನಂತರ ರಮೇಶ್ ಕುಮಾರ್ ಅವರು ಫಲಿತಾಂಶವನ್ನು ಪ್ರಕಟಿಸಿ ವಿಶ್ವಾಸಮತ ಬಿದ್ದುಹೋಗಿದೆ ಎಂದು ಅಧಿಕೃತವಾಗಿ ಘೋಷಿಸಿದರು.
ವಿಶ್ವಾಸಮತಯಾಚನೆಯಲ್ಲಿ ಸೋಲು ಉಂಟಾಗುತ್ತಿದ್ದಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರು ರಾಜಭವನಕ್ಕೆ ತೆರಳಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದರು. ನಂತರ ಸದನವನ್ನು ಅನಿರ್ಧಿಷ್ಠಾವಧಿಗೆ ಮುಂದೂಡಲಾಯಿತು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ