ಮಂಗಳೂರು, ಜು.30: ಮಂಜನಾಡಿ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್‌ನ ಸ್ಥಾಪಕ, ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ, ಹಿರಿಯ ಧಾರ್ಮಿಕ ವಿದ್ವಾಂಸ ಅಲ್‌ಹಾಜ್ ಪಿ.ಎಂ. ಅಬ್ಬಾಸ್ ಮುಸ್ಲಿಯಾರ್ (73) ಸೋಮವಾರ ಸಂಜೆ ನಿಧನರಾಗಿದ್ದು,ಅವರ ಅಂತಿಮ ಸಂಸ್ಕಾರವು ಇಂದು ಬೆಳಗ್ಗೆ ಜನ ಸಾಗರದ ನಡುವೆ ನಡೆಯಿತು.
ಮಂಜನಾಡಿಯ ಅಲ್ ಮದೀನಾ ಇಸ್ಲಾಮಿಕ್ ಕಾಂಪ್ಲೆಕ್ಸ್ ಆವರಣದಲ್ಲಿ ಇಂಡಿಯನ್ ಗ್ರಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ. ಅಬೂಬಕರ್ ಮುಸ್ಲಿಯಾರ್ ಕಾಂತಪುರಂ ನೇತೃತ್ವದಲ್ಲಿ ಮಯ್ಯತ್ ನಮಾಝ್ ನಡೆಯಿತು.ಈ ಸಂದರ್ಭ ಖುರ್ರತುಸ್ಸಾದಾತ್ ಕೂರತ್ ತಂಙಳ್, ಅಶ್ರಫ್ ಅಸ್ಸಖಾಫ್ ತಂಙಳ್ ಆದೂರು,ಕಿಲ್ಲೂರು ತಂಙಳ್, ಆಲಿಕುಂಞಿ ಉಸ್ತಾದ್ ಶಿರಿಯಾ, ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ, ಮಾಜಿ ಸಚಿವ ಯುಟಿ ಖಾದರ್ ಮತ್ತಿತರ ಉಲಮಾ-ಉಮರಾಗಳ ಸಹಿತ ಸಾವಿರಾರು ಶಿಷ್ಯಂದಿರು, ಅಭಿಮಾನಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಕಳೆದ ಕೆಲವು ಸಮಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅಬ್ಬಾಸ್ ಉಸ್ತಾದ್ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ಪತ್ನಿ, 5 ಗಂಡು ಮತ್ತು 3 ಹೆಣ್ಮಕ್ಕಳ ಸಹಿತ ಅಪಾರ ಶಿಷ್ಯ ವೃಂದ, ಅಭಿಮಾನಿ ಹಾಗೂ ಉಲಮಾ-ಉಮಾರಗಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.















ಇನ್ನಷ್ಟು ಸುದ್ದಿಗಳು
ಮುಸ್ಲಿಮ್ ಮತ ಸ್ಥಿತಿಗತಿ ಇಂದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಸುದೃಢಗೊಳಿಸಿದೆ,ರಾಜಣ್ಣ ಅರಿಯಲಿ: ಕೆ.ಅಶ್ರಫ್
ಮೊಂಟೆಪದವು ಗುಡ್ಡ ಕುಸಿತ: ಅವಶೇಷಗಳಡಿಯಲ್ಲಿ ಸಿಲುಕಿದ್ದ ಮಗು ಮೃತ್ಯು- ತಾಯಿಯ ರಕ್ಷಣೆ
ದೇರಳಕಟ್ಟೆ : ಮನೆಯ ತಡೆಗೋಡೆ ಕುಸಿದು 10 ವರ್ಷದ ಪುಟ್ಟ ಬಾಲಕಿ ಮೃತ್ಯು
ಭಾರೀ ಮಳೆ: ಮೊಂಟೆಪದವು ಮನೆ ಮೇಲೆ ಗುಡ್ಡ ಕುಸಿದು ಪುಟ್ಟ ಮಗು ಸಹಿತ ಇಬ್ಬರು ಮೃತ್ಯು
ಸದಾ ಸಮುದಾಯದ ಪರ ಧ್ವನಿಯೆತ್ತುವ ಅಲ್ಪಸಂಖ್ಯಾತ ಸಚಿವರು ಕರಾವಳಿಗೆ ಭೇಟಿ ನೀಡದಿರಲು ಕಾರಣವೇನು?
ಉಲಮಾ ಒಕ್ಕೂಟದ ವಖ್ಫ್ ಪ್ರತಿಭಟನೆ : ಪೊಲೀಸ್ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿದ ಸಂಘಟಕರು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ದ.ಕ.ಜಿಲ್ಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ: ಜೆಡಿಎಸ್ ಬಂಟ್ವಾಳ ಮೈನಾರಿಟಿ ಅಧ್ಯಕ್ಷ ಮುಹಮ್ಮದ್ ಶಫೀಕ್ ಆಲಡ್ಕ
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಮ್ ಬಸ್ ಪ್ರಯಾಣಿಕನ ಮೇಲೆ ಹಲ್ಲೆ: ಶೀಘ್ರ ಕಾನೂನು ಕ್ರಮ ಕೈಗೊಳ್ಳಬೇಕು- ಕೆ.ಅಶ್ರಫ್