ಬೆಂಗಳೂರು(ಜುಲೈ.30): ಮೈಸೂರು ಹುಲಿ ಎಂದೇ ಕರೆಯಲಾಗುವ ಟಿಪ್ಪು ಸುಲ್ತಾನ್ ಜಯಂತಿ ಆಚರಣೆಯನ್ನು ರದ್ದುಗೊಳಿಸಿ ನೂತನ ಸಿಎಂ ಬಿ.ಎಸ್ ಯಡಿಯೂರಪ್ಪನವರು ಆದೇಶ ಹೊರಡಿಸಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ್ದ ಟಿಪ್ಪು ಜಯಂತಿ ಆಚರಣೆಯನ್ನು ಬಿಜೆಪಿ ಅಧಿಕಾರಕ್ಕೇರಿದ ಕೂಡಲೇ ರದ್ದುಗೊಳಿಸಿದೆ. ಮಾಜಿ ಸ್ಪೀಕರ್ ಬೋಪಯ್ಯನವರು ಟಿಪ್ಪು ಜಯಂತಿಯನ್ನು ರದ್ದುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಇದೀಗ ಬೋಪಯ್ಯನವರ ಮನವಿಗೆ ಸ್ಪಂದಿಸಿದ ಸಿಎಂ ಬಿ.ಎಸ್ ಯಡಿಯೂರಪ್ಪನವರು ಟಿಪ್ಪು ಜಯಂತಿ ರದ್ದುಗೊಳಿಸಿ ಆದೇಶ ಹೊರಡಿಸಿದ್ಧಾರೆ.
ಸಿದ್ದರಾಮಯ್ಯ ನೇತೃತ್ವ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿದ್ದ ಟಿಪ್ಪು ಜಯಂತಿಯನ್ನು ಹಿಂದಿನ ಸಿಎಂ ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವೂ ಮುಂದುವರೆಸಿತ್ತು. ಟಿಪ್ಪು ಜಯಂತಿ ಆಚರಣೆ ಕೈಬಿಡಬೇಕೆಂದು ಬಿಜೆಪಿ ಮುಖಂಡರು ಸರಕಾರದ ಮೇಲೆ ಒತ್ತಡ ಹಾಕುತ್ತಿದ್ದಾರೆ. ಆದರೆ, ಕರ್ನಾಟಕ ಸರ್ವಜನಾಂಗದ ಶಾಂತಿ ತೋಟ ಎಂದು ಕುವೆಂಪು ಹೇಳಿದ್ಧಾರೆ. ಅದರಂತೆಯೇ ಟಿಪ್ಪು ಜಯಂತಿ ಆಚರಿಸಿದ್ದೇವೆ ಎಂದು ಕುಮಾರಸ್ವಾಮಿ ಬಿಜೆಪಿಗೆ ಸಮಜಾಯಿಷಿ ನೀಡಿದ್ದರು.
ಬಿಜೆಪಿ ಸೇರಿದಂತೆ ಸಂಘಪರಿವಾರ ಮುಖಂಡರು ಟಿಪ್ಪು ಜಯಂತಿ ಆಚರಿಸದಂತೆ ಹಿಂದಿನಿಂದಲೂ ಸರ್ಕಾರಗಳ ಮೇಲೆ ಒತ್ತಡ ಹಾಕುತ್ತಲೇ ಇದ್ದರು. ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಿಸಿದರೆ ಅದಕ್ಕೆ ಪ್ರಬಲ ವಿರೋಧ ವ್ಯಕ್ತಪಡಿಸುತ್ತಿದ್ದರು.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ
ಜನವರಿಯಲ್ಲಿ ಸಿಎಂ ಬೊಮ್ಮಾಯಿ ಬದಲಾವಣೆ ಖಚಿತ- ಸಿಎಂ ಇಬ್ರಾಹಿಂ
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಸಭೆಯಲ್ಲಿ ಕೈಗೊಂಡ ನಿರ್ಣಯಗಳು
ಮತಾಂತರ ನಿಷೇಧ ಮಸೂದೆ- ಹೈಕೋರ್ಟ್ ಮೆಟ್ಟಿಲೇರಲು ಮುಂದಾದ ಕ್ರೈಸ್ತರು