ಚಿಕ್ಕಮಗಳೂರು,ಜು.31: ಕಾಫಿ ಡೇ ಸಂಸ್ಥಾಪಕ, ಮಾಜಿ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅಳಿಯ ವಿಜಿ ಸಿದ್ದಾರ್ಥ ಮೃತದೇಹ ಬುಧವಾರ ಬೆಳಗ್ಗೆ ಮಂಗಳೂರಿನ ಹೊಯ್ಗೆ ಬಜಾರ್ ತೀರದಲ್ಲಿ ಪತ್ತೆಯಾಗಿತ್ತು. ಸಿದ್ದಾರ್ಥ ಹುಟ್ಟೂರು ಚಿಕ್ಕಮಗಳೂರಿನಲ್ಲಿಯೇ ಅಂತ್ಯಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ ಎಂದು ವರದಿ ತಿಳಿಸಿದೆ. ಸಂಜೆ 6.30ರ ನಂತರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಿದ್ದಾರ್ಥ ಅವರ ಹುಟ್ಟೂರಾದ ಚಿಕ್ಕಮಗಳೂರಿನ ಕಾಫಿ ಎಸ್ಟೇಟ್ ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಸದಾಶಿವನಗರದಿಂದ ಎಸ್ ಎಂ ಕೃಷ್ಣ, ಪತ್ನಿ ಪ್ರೇಮಾ, ಮಗಳು ಮಾಳವಿಕಾ ಸೇರಿದಂತೆ ಸಿದ್ದಾರ್ಥ ಕುಟುಂಬಸ್ಥರು ಚಿಕ್ಕಮಗಳೂರಿನತ್ತ ಪ್ರಯಾಣ ಬೆಳೆಸಿದ್ದಾರೆ.
“ಇನ್ನೊಂದೆಡೆ ಮುಂಜಾನೆ ಸಿದ್ದಾರ್ಥ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ, ಮೂಡಿಗೆರೆ ತಾಲುಕಿನ ಚಟ್ಟನಹಳ್ಳಿ ಗ್ರಾಮದಲ್ಲಿ ಸೂತಕದ ಛಾಯೆ ಅವರಿಸಿದ್ದು, ಚೇತನಾ ಎಸ್ಟೇಟ್ ನಲ್ಲಿ ಸಿದ್ದಾರ್ಥ ತಾಯಿ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.ಸಿದ್ದಾರ್ಥ ತಂದೆ ಗಂಗಯ್ಯ ಹೆಗ್ಡೆ ಮೈಸೂರಿನ ಆಸ್ಪತ್ರೆಯಲ್ಲಿ ಕೋಮಾದಲ್ಲಿದ್ದು, ಈ ನಿಟ್ಟಿನಲ್ಲಿ ಮಗನ ಸಾವಿನ ಸುದ್ದಿಯನ್ನು ಹೇಳಬೇಕೋ ಬೇಡವೋ ಎಂಬ ಬಗ್ಗೆ ಕುಟುಂಬ ವರ್ಗ ಗೊಂದಲಕ್ಕೊಳಗಾಗಿದೆ ಎಂದು ವರದಿ ವಿವರಿಸಿದೆ”.
ಶವ ಸಂಸ್ಕಾರಕ್ಕೂ ಮುನ್ನ ಚಿಕ್ಕಮಗಳೂರು ನಗರದಲ್ಲಿರುವ ಎಬಿಸಿ ಕಾಫಿ ಗ್ಲೋಬಲ್ ಲಿ. ಕಂಪೆನಿ ಆವರಣದಲ್ಲಿ ಸಿದ್ದಾರ್ಥ ಅವರ ಪಾರ್ಥಿವ ಅಂತಿಮ ದರ್ಶನ ನಡೆಯಲಿದ್ದು, ಅಂತಿಮ ದರ್ಶನಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ನೇತೃತ್ವದಲ್ಲಿ ಅಕಲ ಸಿದ್ಧತೆ ಕಾರ್ಯ ಭರದಿಂದ ಸಾಗುತ್ತಿದೆ.ಅಂತಿಮ ದರ್ಶನಕ್ಕೆ ನಾಡಿನ ಪ್ರಮುಖ ರಾಜಕಾರಣಿಗಳು, ಕಲಾವಿದರು, ಉದ್ಯಮಿಗಳೂ, ಸಿದ್ದಾರ್ಥ ಒಡೆತನದ ಸಂಸ್ಥೆಗಳ ಸಿಬ್ಬಂದಿ, ಕಾರ್ಮಿಕರು ಹಾಗೂ ಸಾವಿರಾರು ಮಂದಿ ಸಾರ್ವಜನಿಕರು ಆಗಮಿಸುವ ಹಿನ್ನೆಯಲ್ಲಿ ವ್ಯವಸ್ಥಿತ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.
ಸಿದ್ದಾರ್ಥ ಅವರ ಸಾವಿನ ಹಿನ್ನೆಲೆಯಲ್ಲಿ ನಗರದ ಎಬಿಸಿ ಕಂಪೆನಿ ಸಿಬ್ಬಂದಿ, ಕಾಫಿ ಡೇ, ಅಂಬರ್ ವ್ಯಾಲಿ, ಸೆರಾಯ್ ರೆಸಾರ್ಟ್, ಹೊಟೇಲ್ ಮ್ಯಾನೇಜ್ಮೆಂಟ್ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಈಗಾಗಲೆ ಎಬಿಸಿ ಕಂಪೆನಿ ಅವರಣದಲ್ಲಿ ಜಮಾಯಿಸಲಾರಂಭಿಸಿದ್ದಾರೆ.
ಸೋಮವಾರ ಸಂಜೆಯಿಂದ ಮಂಗಳೂರು-ಉಳ್ಳಾಲ ಸಮೀಪದ ನೇತ್ರಾವತಿ ನದಿ ಪ್ರದೇಶದ ಬಳಿ ಎಜಿ ಸಿದ್ದಾರ್ಥ ನಾಪತ್ತೆಯಾಗಿರುವುದಾಗಿ ಸಿದ್ದಾರ್ಥ ಕಾರು ಚಾಲಕ ಹೇಳಿಕೆ ನೀಡಿದ್ದರು. ಬಳಿಕ ಅಗ್ನಿಶಾಮಕ ದಳ, ಎನ್ ಡಿಆರ್ ಎಫ್, ಹೋವರ್ ಕ್ರಾಫ್ಟ್, ಮುಳುಗು ತಜ್ಞರು ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದರು.
ಮಂಗಳವಾರ ತಡರಾತ್ರಿವರೆಗೂ ಶೋಧ ಕಾರ್ಯಾಚರಣೆ ನಡೆದಿತ್ತಾದರೂ ಯಾವುದೇ ಸುಳಿವು ಪತ್ತೆಯಾಗಿರಲಿಲ್ಲವಾಗಿತ್ತು. ಬುಧವಾರ ಬೆಳಗ್ಗೆ ಮಂಗಳೂರಿನ ಹೊಯ್ಗೆ ಬಜಾರ್ ತೀರದ ಬಳಿ ಮೀನುಗಾರರಿಗೆ ಶವ ಸಿಕ್ಕಿತ್ತು. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಮೂಲಕ ಸಿದ್ದಾರ್ಥ ಪ್ರಕರಣದ ಊಹಾಪೋಹಕ್ಕೆ ತೆರೆ ಬಿದ್ದಿದಂತಾಗಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ