ಬೆಂಗಳೂರು: ರಾಜ್ಯದಲ್ಲಿ ನೆರೆ, ಬರಕ್ಕೆ ಸ್ಪಂದಿಸಬೇಕಾದ ಇಲಾಖೆಗೆ ಮಂತ್ರಿಗಳೇ ಇರಲ್ಲದಿರುವುದಕ್ಕೆ, ಸರ್ಕಾರ ರಚನೆಯಾಗಿ ಹಲವು ದಿನಗಳೇ ಕಳೆದರೂ ಮಂತ್ರಿ ಮಂಡಲವೇ ರಚನೆಯಾಗದೇ ಇರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ರಾಜ್ಯದ ಪರಿಸ್ಥಿತಿ ರಾಜ್ಯಪಾಲರಿಗೆ ಕಾಣುತ್ತಿಲ್ಲವೇ ಎಂದೂ ಅವರು ಪ್ರಶ್ನೆ ಮಾಡಿದ್ದಾರೆ.
ಈ ಕುರಿತು ಇಂದು ಸರಣಿ ಟ್ವೀಟ್ ಮಾಡಿದ್ದಾರೆ ಸಿದ್ದರಾಮಯ್ಯ.
‘ವಿಶ್ವಾಸ ಮತಯಾಚನೆಗೆ ಸಂದೇಶದ ಮೇಲೆ ಸಂದೇಶ ಕಳಿಸುತ್ತಿದ್ದ ಘನತೆವೆತ್ತ ರಾಜ್ಯಪಾಲರ ಗಮನಕ್ಕೆ… ಸಚಿವರಿಲ್ಲದ ಏಕವ್ಯಕ್ತಿ ಸಂಪುಟದಿಂದಾಗಿ ರಾಜ್ಯದ ಜನತೆ ಅನುಭವಿಸುತ್ತಿರುವ ಬವಣೆ ಕಾಣುತ್ತಿಲ್ಲವೇ?’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಅತಿವೃಷ್ಟಿ-ಅನಾವೃಷ್ಟಿಗಳಿಗೆ ಸ್ಪಂದಿಸಬೇಕಾದ ಕಂದಾಯ, ಕೃಷಿ, ಗ್ರಾಮೀಣ ಅಭಿವೃದ್ದಿ ಇಲಾಖೆಗಳಿಗೆ ಸಚಿವರೇ ಇಲ್ಲ. ಆದ್ಯತೆ ಅಧಿಕಾರಿಗಳ ವರ್ಗಾವಣೆಯದ್ದೇ? ಸಂಪುಟ ವಿಸ್ತರಣೆಯದ್ದೇ?’ ಎಂದು ಅವರು ಕೇಳಿದ್ದಾರೆ.
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಯಡಿಯೂರಪ್ಪ ಅವರು ತೋರಿಸಿದ ಅತಿ ಅವಸರವನ್ನು ಸಂಪುಟ ವಿಸ್ತರಣೆಗೆ ತೋರುತ್ತಿಲ್ಲವೇಕೆ? ಅತೀವೃಷ್ಟಿ-ಅನಾವೃಷ್ಟಿಯಿಂದ ರಾಜ್ಯದ ಜನರು ಸಂಕಟದಲ್ಲಿದ್ದಾರೆ. ಆಡಳಿತ ಯಂತ್ರ ಸ್ತಬ್ಧವಾಗಿದೆ. ಇದೇನು ಪ್ರಜಾಪ್ರಭುತ್ವವೇ? ಏಕಚಕ್ರಾಧಿಪತ್ಯವೇ?’ ಎಂದೂ ಅವರು ಪಶ್ನೆಯ ಸುರಿಮಳೆಗೈದಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ