ಶ್ರೀನಗರ, ಆ. 5: ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ನಾಯಕರಾದ ಮೆಹಬೂಬ ಮುಫ್ತಿ, ಒಮರ್ ಅಬ್ದುಲ್ಲಾ ಮತ್ತು ಸಜ್ಜಾದ್ ಲೋನ್ ರಿಗೆ ರವಿವಾರ ತಡರಾತ್ರಿ ಗೃಹಬಂಧನ ವಿಧಿಸಲಾಗಿದೆ ಎಂದು ವರದಿಯಾಗಿದೆ.ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿರುವ ದಿಢೀರ್ ಬೆಳವಣಿಗೆಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಕಾಶ್ಮೀರದಲ್ಲಿ ಕೇಂದ್ರ ಸರಕಾರ ಭಾರೀ ಸಂಖ್ಯೆಯಲ್ಲಿ ಸೇನಾ ನಿಯೋಜನೆ ಮಾಡಿರುವ ಬೆನ್ನಿಗೆ ಟ್ವೀಟ್ ಮಾಡಿರುವ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಮುಖಂಡ, ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ “ನನ್ನನ್ನು ರವಿವಾರ ಮಧ್ಯರಾತ್ರಿಯಿಂದ ಗೃಹ ಬಂಧನದಲ್ಲಿ ಇರಿಸುವ ಸಾಧ್ಯತೆ ಇದೆ” ಎಂದು ಹೇಳಿದ್ದರು.
ಅಮರನಾಥ ಯಾತ್ರಿಗಳು ಹಾಗು ರಾಜ್ಯದಲ್ಲಿರುವ ಎಲ್ಲಾ ಪ್ರವಾಸಿಗಳು ತಕ್ಷಣ ಜಮ್ಮು ಕಾಶ್ಮೀರದಿಂದ ವಾಪಸ್ ಹೋಗುವಂತೆ ಆದೇಶಿಸಿರುವ ಕೇಂದ್ರ ಸರಕಾರ ಅಲ್ಲಿ ಬಹು ದೊಡ್ಡ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಿದೆ. ಅಲ್ಲಲ್ಲಿ ಮೊಬೈಲ್ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ರಾಜ್ಯ ಸರಕಾರಕ್ಕೆ ವಿಶೇಷ ಅಧಿಕಾರ ನೀಡುವ ಸಂವಿಧಾನದ 35ಎ ಕಲಂಗೆ ಮಹತ್ವದ ತಿದ್ದುಪಡಿ ತರುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಡಿವೆ.
ಸೋಮವಾರ ಬೆಳಗ್ಗೆ ನಡೆಯುವ ಕೇಂದ್ರ ಸಂಪುಟ ಸಭೆಯ ಬಳಿಕ ಕಾಶ್ಮೀರ ಕುರಿತು ಮಹತ್ವದ ತೀರ್ಮಾನ ಹೊರ ಬೀಳಲಿದೆ ಎಂದು ಹೇಳಲಾಗುತ್ತಿದೆ.
ಈ ನಡುವೆ ಟ್ವೀಟ್ ಮಾಡಿರುವ ಒಮರ್ ಅಬ್ದುಲ್ಲಾ “ ನನ್ನನ್ನು ಹಾಗು ಇತರ ಮುಖ್ಯವಾಹಿನಿಯ ರಾಜಕೀಯ ನಾಯಕರನ್ನು ಗೃಹ ಬಂಧನದಲ್ಲಿ ಇಡಲಾಗುವುದು ಎಂಬ ಸಂಶಯವಿದೆ. ಈ ಬಗ್ಗೆ ಖಚಿತ ಪಡಿಸಲು ಸಾಧ್ಯವಿಲ್ಲ. ಅಲ್ಲಾಹನೇ ನಮ್ಮನ್ನು ಕಾಪಾಡಬೇಕು” ಎಂದು ಟ್ವೀಟ್ ಮಾಡಿದ್ದರು. ಜೊತೆಗೆ ಯಾವುದೇ ಕಾರಣಕ್ಕೂ ಶಾಂತಿ ಕಾಪಾಡಿ ಎಂದು ಜನರಲ್ಲಿ ವಿನಂತಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ