ಬೆಂಗಳೂರು[ಆ.08]: ಆಶ್ಲೇಷ ಮಳೆಯಬ್ಬರಕ್ಕೆ ಕರ್ನಾಟಕದ ಅರ್ಧಕ್ಕೂ ಹೆಚ್ಚು ಭಾಗ ಮುಳುಗಲಾರಂಭಿಸಿದೆ. ಸೂರು ಕಳೆದುಕೊಂಡ ಜನರು ಗಂಜಿ ಕೇಂದ್ರಕ್ಕೆ ಧಾವಿಸುತ್ತಿದ್ದಾರೆ. ಮನೆ, ರಸ್ತೆಗಳು ನೀರಿನ ರಭಸಕ್ಕೆ ಕೊಚ್ಚಿ ಹೋಗಲಾರಂಭಿಸಿವೆ. ಮೂಕ ಪ್ರಾಣಿಗಳು ವರುಣನ ಅಬ್ಬರಕ್ಕೆ ಬಲಿಯಾಗುತ್ತಿವೆ. ವರುಣನ ತಾಂಡವಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಹೀಗಿರುವಾಗ ಮಾಜಿ ಸಿಎಂ ಕುಮಾರಸ್ವಾಮಿ ಹಾಲಿ ಸಿಎಂ ವಿರುದ್ಧ ಕಿಡಿ ಕಾರಿದ್ದು, ಅತೃಪ್ತರಿಗೆ ಮುಂಬೈಗೆ ಕಳುಹಿಸಲು ಕಲ್ಪಿಸಿದ್ದ ವಿಶೇಷ ವಿಮಾನ ವ್ಯವಸ್ಥೆ ಪ್ರವಾಹದಲ್ಲಿ ಸಿಲುಕಿದ ಬಡವರಿಗೇಕಿಲ್ಲ ಎಂದು ಪ್ರಶ್ನಿಸಿದ್ದಾರೆ.
ಹೌದು ಜೆಡಿಎಸ್ ಅಧಿಕೃತ ಟ್ವಿಟರ್ ಖಾತೆಯಿಂದ ಟ್ವೀಟ್ ಮಾಡಲಾಗಿದ್ದು, ‘ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ! ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ!’ ಎನ್ನುವ ಮೂಲಕ ಹಾಲಿ ಸಿಎಂ ಬಿ. ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ವಿರುದ್ಧ ಕಿಡಿ ಕಾರಿದೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ