ಶಿರಾಡಿ ಘಾಟಿಯಲ್ಲಿ 4 ದಿನ ರಾತ್ರಿ ವಾಹನ ಸಂಚಾರ ನಿಷೇಧ

ಹಾಸನ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 75 ರಸ್ತೆಯ ಕಿ.ಮೀ.237.00 ರಿಂದ 263.00 ವರೆಗಿನ ಶಿರಾಡಿಘಾಟ್ ರಸ್ತೆಯಲ್ಲಿ ಎಲ್ಲಾ ವಾಹನಗಳಿಗೆ ರಾತ್ರಿ ಸಂಚಾರವನ್ನು ನಿಷೇಧಿಸಿರುವುದಾಗಿ ಹಾಸನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಭಾಗದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಗುಡ್ಡೆ ಕುಸಿದಿರುವ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗಲಿದೆ.

ಆದ್ದರಿಂದ ಸಾರ್ವಜನಿಕರ ಹಿತದೃಷ್ಟಿಯಿಂದ ದಿನಾಂಕ 09/8/19 ರಿಂದ 12/8/19 ರವರೆಗೆ ಸಂಜೆ 7 ರಿಂದ ಬೆಳಿಗ್ಗೆ 7 ರವರೆಗೆ ಯಾವುದೇ ವಾಹನಗಳಿಗೆ ಸಂಚಾರವನ್ನು ಅನುಮತಿಸಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿಯ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!