ಬೆಂಗಳೂರು (ಆ. 12): ತ್ಯಾಗ ಬಲಿದಾನದ ಸಂಕೇತವಾದ ಬಕ್ರೀದ್ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ರಾಜ್ಯದಲ್ಲು ವಿವಿಧ ಈದ್ಗಾಹ್ ಹಾಗೂ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗಿ ಪರಸ್ಪರ ಶುಭಾಶಯ ಕೋರಿದ್ದಾರೆ.
ಈ ಪವಿತ್ರ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸೇರಿ ಅನೇಕ ಗಣ್ಯರು ಶುಭ ಹಾರೈಸಿದ್ದಾರೆ.
‘ಪ್ರೀತಿ, ಭ್ರಾತೃತ್ವ ಮತ್ತು ಮಾನವೀಯ ಸೇವೆಯನ್ನು ಈದ್ ಸಂಕೇತಿಸುತ್ತದೆ. ಈ ಸಂಸ್ಕೃತಿಯನ್ನು ಪ್ರತಿನಿಧಿಸುವ ಈ ಸಾರ್ವತ್ರಿಕ ಮೌಲ್ಯಗಳಿಗೆ ನಾವು ಬದ್ಧರಾಗಿರೋಣ’ ಎಂದು ರಾಷ್ಟ್ರಪತಿ ಕೋವಿಂದ್ ಶುಭ ಹಾರೈಸಿದ್ದಾರೆ.
ಬಕ್ರೀದ್ ಹಬ್ಬದ ಶುಭಾಶಯಗಳೊಂದಿಗೆ, ಈ ಹಬ್ಬ ನಮ್ಮ ಸಮಾಜದಲ್ಲಿ ಶಾಂತಿ ಮತ್ತು ಸಂತೋಷದ ಮನೋಭಾವವನ್ನು ಹೆಚ್ಚಿಸಲಿ’ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.