ದುಬೈ: ವಾಹನಗಳ ಇಂಜಿನ್ ಆಫ್ ಮಾಡದೆ ರಸ್ತೆಬದಿ ನಿಲ್ಲಿಸಿದರೆ 300 ದಿರ್ಹಂ ವರೆಗೆ ದಂಡ ವಿಧಿಸಲಾಗುವುದು ಎಂದು ದುಬೈ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಜನರು ತಮ್ಮ ವಾಹನಗಳನ್ನು ಕಿರಾಣಿ ಅಂಗಡಿ, ಎಟಿಎಂ ಅಥವಾ ರೆಸ್ಟೋರೆಂಟ್‌ಗಳಿಂದ ಪಾರ್ಸೆಲ್‌ಗಳನ್ನು ಖರೀದಿಸುವ ಸಲುವಾಗಿ ನಿಲ್ಲಿಸುವುದು ಸಾಮಾನ್ಯವಾಗಿದೆ. ವಿಶೇಷವಾಗಿ ಬೇಸಿಗೆಯಲ್ಲಿ, ಅಧಿಕ ಬಿಸಿಯಾಗುವುದನ್ನು ತಪ್ಪಿಸಲು ಇಂಜಿನ್ ಅನ್ನು ಆನ್ ಮಾಡಿ ಇಡಲಾಗುತ್ತದೆ. ಈ ರೀತಿ ಕಾರನ್ನು ಆಫ್ ಮಾಡದೆ ನಿಲ್ಲಿಸುವುದರಿಂದ ವಾಹನದಿಂದ ಕದಿಯುವುದು ಸುಲಭವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರು ನಡೆಸಿದ ಅಧ್ಯಯನದ ಪ್ರಕಾರ, ಎಮಿರೇಟ್‌ನಲ್ಲಿ ಆನ್ ಮಾಡಿ ಇಟ್ಟ ವಾಹನಗಳಲ್ಲಿ ಹೆಚ್ಚಿನ ಕಳ್ಳತನಗಳು ಸಂಭವಿಸಿವೆ. ವಾಹನ ಚಾಲಕರು ಇಂಜಿನ್ ಆಫ್ ಮಾಡಿ ವಾಹನವನ್ನು ಲಾಕ್ ಮಾಡಿ ನಿಲ್ಲಿಸಬೇಕು. ರಾತ್ರಿ ಹೊತ್ತು ನಿಮ್ಮ ವಾಹನವನ್ನು ತುಂಬಾ ಕತ್ತಲೆಯಲ್ಲಿ ನಿಲ್ಲಿಸಬೇಡಿ. ಜನರಹಿತ ಪ್ರದೇಶಗಳು ಅಥವಾ ಮರಳು ಪ್ರದೇಶಗಳಲ್ಲಿ ದೀರ್ಘಕಾಲದವರೆಗೆ ವಾಹನ ನಿಲುಗಡೆ ಮಾಡುವುದನ್ನು ತಪ್ಪಿಸಬೇಕು.
ಕಾರುಗಳನ್ನು ಸುರಕ್ಷಿತ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಬೇಕು, ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರುವ ಪ್ರದೇಶದಲ್ಲಿ ನಿಲ್ಲಿಸುವುದು ಉತ್ತಮ. ಇದಲ್ಲದೆ, ವಾಹನಗಳಲ್ಲಿ ಬೆಲೆಬಾಳುವ ವಸ್ತುಗಳನ್ನು ಹೊರಗಿನಿಂದ ಕಾಣುವಂತೆ ಪ್ರದರ್ಶಿಸಬಾರದು ಎಂದು ದುಬೈ ಪೊಲೀಸರು ನಿರ್ದೇಶನ ನೀಡಿದ್ದಾರೆ.















ಇನ್ನಷ್ಟು ಸುದ್ದಿಗಳು
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ