ನವದೆಹಲಿ, ಆ 22 – ಐಎನ್ಎಕ್ಸ್ ಪ್ರಕರಣಕ್ಕೆ ಸಂಬಂಧಿಸಿ ಬುಧವಾರ ಮಧ್ಯರಾತ್ರಿ ಸಿಬಿಐನಿಂದ ಬಂಧಿತರಾಗಿರುವ ಮಾಜಿ ವಿತ್ತ ಸಚಿವ ಪಿ ಚಿದಂಬರಂ ಅವರನ್ನು ಬಿಗಿ ಭದ್ರತೆಯ ನಡುವೆ ಸಿಬಿಐ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕರೆದೊಯ್ಯಲಾಯ್ತು.
ಯಾವುದೇ ಅಹಿತಕರ ಘಟನೆಗೆ ಅವಕಾಶವಾಗದಂತೆ ಸಿಬಿಐ ಕೇಂದ್ರ ಕಚೇರಿ ಹಾಗೂ ಸಿಬಿಐ ನ್ಯಾಯಾಲಯದ ಆವರಣದಲ್ಲಿ ಜಲಫಿರಂಗಿ ವ್ಯವಸ್ಥೆ, ಹೆಚ್ಚುವರಿ ಬ್ಯಾರಿಕೇಡ್ ನಿರ್ಮಾಣದೊಂದಿಗೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.ಗುರುವಾರ ಬೆಳಗ್ಗೆ ಸಿಬಿಐ ಅಧಿಕಾರಿಗಳು ಅವರನ್ನು ವಿಚಾರಣೆಗೆ ಒಳಪಡಿಸಿದ್ದರು. ಚಿದಂಬರಂ ಅವರ ಕಾನೂನು ತಂಡ ಮತ್ತು ಕುಟುಂಬ ಸದಸ್ಯರು ನ್ಯಾಯಾಲಯದ ಬಳಿ ಹಾಜರಿರುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಬುಧವಾರ ಮಧ್ಯರಾತ್ರಿಯ ದೆಹಲಿಯ ಜೋರ್ ಬಾಗ್ ನಿವಾಸದ ಬಳಿ ಚಿದಂಬರಂ ಅವರನ್ನು ಬಂಧಿಸಲಾಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್ ಕಾರ್ಯಕರ್ತರು, ಪೊಲೀಸರನ್ನು ತಡೆಯಲು ಯತ್ನಿಸಿದರು. ಐಎನ್ಎಕ್ಸ್ ಪ್ರಕರಣದಲ್ಲಿ ತಮಗೆ ಯಾವುದೇ ಸಂಬಂಧವಿಲ್ಲ ಎಂದು ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮನೆಗೆ ತೆರಳಿದ ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಹಿಂಬಾಲಿಸಿ, ವಶಕ್ಕೆ ತೆಗೆದುಕೊಂಡರು.
ನ್ಯಾಯಾಲಯವೊಂದು ಬಂಧನಕ್ಕೆ ಆದೇಶಿಸಿದ್ದ ಹಿನ್ನೆಲೆಯಲ್ಲಿ ಚಿದಂಬರಂ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ