ಉಪ್ಪಳ ಆ.22: ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಉಳ್ಳಾಲ ಸಯ್ಯಿದ್ ಮದನಿ ಶರೀಅತ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆ ಇಂದು ರಾತ್ರಿ 10 ಗಂಟೆ ಸುಮಾರಿಗೆ ಬಂದ್ಯೋಡ್ ಸಮೀಪ ಸಂಭವಿಸಿದೆ.
ಅರಾಫತ್, ಶಿಹಾನ್, ಜಾಫರ್ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಬಂದ್ಯೋಡ್ನ ಮಲ್ಲಂಗೈ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳು ಬಂದ್ಯೋಡ್ ಸಮೀಪ ಕಾರ್ಯಕ್ರಮ ವೊಂದರಲ್ಲಿ ಭಾಗವಹಿಸಿ ಕಾರಿನಲ್ಲಿ ಉಳ್ಳಾಲದತ್ತ ಹಿಂದಿರುಗುತ್ತಿದ್ದ ವೇಳೆ ಕಾಸರಗೋಡಿನತ್ತ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಅದರಲ್ಲಿ ನಾಲ್ವರಿಗೂ ತೀವ್ರ ಗಾಯಗಳಾಗಿವೆ. ಸ್ಥಳೀಯರು ಕೂಡಲೇ ಅವರನ್ನು ಬಂದ್ಯೋಡ್ನ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ