ಬಿಯರಿಟ್ಜ್: ಕಾಶ್ಮೀರ ವಿಷಯವು ಭಾರತ ಮತ್ತು ಪಾಕಿಸ್ತಾನ ಎದುರಿಸುತ್ತಿರುವ ದ್ವಿಪಕ್ಷೀಯ ಸಮಸ್ಯೆಯಾಗಿದ್ದು, ಈ ವಿಚಾರವಾಗಿ ಯಾವುದೇ ದೇಶವು ಮಧ್ಯಸ್ಥಿಕೆ ವಹಿಸುವ ಅವಶ್ಯಕತೆ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸೋಮವಾರ ಸ್ಪಷ್ಟಪಡಿಸಿದ್ದಾರೆ.
ಫ್ರಾನ್ಸ್‌ನ ಬಿಯರಿಟ್ಜ್‌ನಲ್ಲಿ ನಡೆದ ಜಿ 7 ಶೃಂಗಸಭೆಯ ಹೊರತಾಗಿ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಕಾಶ್ಮೀರ ಸಮಸ್ಯೆಯು ಯಾವುದೇ ಮೂರನೇ ಶಕ್ತಿಯ ಹಸ್ತಕ್ಷೇಪವನ್ನು ಬಯಸುವುದಿಲ್ಲ ಎಂದು ಸ್ಪಷ್ಟಪಡಿವಾಗಿ ಹೇಳಿದ್ದಾರೆ.
“ಭಾರತ ಮತ್ತು ಪಾಕಿಸ್ತಾನವು ಹಲವಾರು ದ್ವಿಪಕ್ಷೀಯ ಸಮಸ್ಯೆಗಳನ್ನು ಹೊಂದಿವೆ. ಉಭಯ ದೇಶಗಳು ಕುಳಿತು ದ್ವಿಪಕ್ಷೀಯ ಮಾತುಕತೆ ನಡೆಸುವ ಮೂಲಕ ಅದಕ್ಕೆ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಭಾರತ ಮತ್ತು ಪಾಕಿಸ್ತಾನ ಬಡತನ ಮತ್ತು ಶಿಕ್ಷಣದ ಕೊರತೆಯ ವಿರುದ್ಧ ಹೋರಾಡಬೇಕಾಗಿದೆ. ಎರಡೂ ರಾಷ್ಟ್ರಗಳ ಜನರ ಉನ್ನತಿಗಾಗಿ ಕೆಲಸ ಮಾಡಬೇಕಾಗಿದೆ ಪ್ರಧಾನಿ ಮೋದಿ ಹೇಳಿದರು.
ಜಪಾನ್‌ನ ಒಸಾಕಾದಲ್ಲಿ ನಡೆದ ಜಿ 20 ಶೃಂಗಸಭೆಯ ಸಂದರ್ಭದಲ್ಲಿ ಇಬ್ಬರೂ ಭೇಟಿಯಾದಾಗ ಕಾಶ್ಮೀರಕ್ಕೆ ಪರಿಹಾರ ಕಂಡುಕೊಳ್ಳಲು ಪಾಕಿಸ್ತಾನದೊಂದಿಗೆ ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿ ಕೇಳಿಕೊಂಡಿದ್ದಾರೆ ಎಂದು ಅಧ್ಯಕ್ಷ ಟ್ರಂಪ್ ಹೇಳಿಕೊಂಡ ಕೆಲವೇ ದಿನಗಳಲ್ಲಿ ಈ ಹೇಳಿಕೆ ಹೊರಬಂದಿದೆ.
“ಇದು ನನ್ನ ಸ್ನೇಹಿತ ಮತ್ತು ವಿಶ್ವದ ಅತ್ಯಂತ ಹಳೆಯ ಪ್ರಜಾಪ್ರಭುತ್ವದೊಂದಿಗಿನ ಮಹತ್ವದ ಸಭೆ. ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ. ಅವರು (ಟ್ರಂಪ್) ನನ್ನನ್ನು ಚುನಾವಣಾ ಗೆಲುವಿಗೆ ಅಭಿನಂದಿಸಿದರು. ನಾವಿಬ್ಬರೂ ಒಟ್ಟಾಗಿ ಕೆಲಸ ಮಾಡಬಹುದು, ನಮ್ಮಲ್ಲಿ ಸಾಮಾನ್ಯ ಮೌಲ್ಯಗಳಿವೆ. ಆರ್ಥಿಕ ಕ್ಷೇತ್ರದ ಪ್ರಗತಿಗೆ ಸಂಬಂಧಿಸಿದಂತೆ ನಾವು ನಿರಂತರ ಮಾತುಕತೆ ನಡೆಸುತ್ತಿದ್ದೇವೆ ಮತ್ತು ಅವರ (ಯುಎಸ್) ಸಲಹೆಗಳನ್ನು ಸೂಕ್ತವಾಗಿ ಪರಿಗಣಿಸುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ