ಬೆಂಗಳೂರು : ದೆಹಲಿಯ ನಿವಾಸಗಳ ಮೇಲಿನ ಐಟಿ ದಾಳಿ ಪ್ರಕರಣ ಸಂಬಂಧ ಇಡಿ(ಜಾರಿ ನಿರ್ದೇಶನಾಲಯ) ಸಮನ್ಸ್ ರದ್ದು ಕೋರಿ ಡಿಕೆಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.
ಈ ಹಿನ್ನಲೆಯಲ್ಲಿ ಡಿಕೆ ಶಿವಕುಮಾರ್ ಅವರು ಇಂದು ಇಡಿ ವಿಚಾರಣೆಗೆ ತೆರಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೇನೂ ತಪ್ಪು ಮಾಡಿಲ್ಲ, ರೇಪು ಮಾಡಿಲ್ಲ, ದುಡ್ಡು ಕದ್ದಿಲ್ಲ. ರಾಜಕೀಯವಾಗಿ ನಮ್ಮ ಪಕ್ಷದ ಶಾಸಕರನ್ನು ರಕ್ಷಣೆ ಮಾಡಲು ಅವರನ್ನು ಹಿಡಿದಿಟ್ಟಿದ್ವಿ. ಹೀಗಾಗಿ ಅದಕ್ಕಾಗಿ ಈಗ ಬೇಕಾದಷ್ಟು ಅನುಭವಿಸುತ್ತಿದ್ದೇವೆ. ಪರವಾಗಿಲ್ಲ ಎಲ್ಲವನ್ನೂ ನಾವು ಫೇಸ್ ಮಾಡಬೇಕು ಎಂದು ಹೇಳಿದ್ದಾರೆ.
ಏನಾದರೂ, ಯಾರಿಗಾದರೂ ಒಳ್ಳೆಯದು ಮಾಡಲು ಹೊರಟಾಗ ಈ ರೀತಿ ಆಗುತ್ತದೆ. ಗುರುವಾರ ನಾವು ಹಾಕಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ. ಗುರುವಾರ ರಾತ್ರಿ 9.40ಕ್ಕೆ ನನಗೆ ಸಮನ್ಸ್ ಕೊಟ್ಟು ಒಂದು ಗಂಟೆಗೆ ಬರಬೇಕು ಎಂದು ನೋಟಿಸ್ ನೀಡಿದ್ದಾರೆ. ಅದಕ್ಕೂ ಮೊದಲು ಪ್ರೆಸ್ ಮೀಟ್ ಮಾಡಿ ಮಾತಾಡೇ ದೆಹಲಿಗೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ