ನವದೆಹಲಿ ( ಆ.30) : ದೆಹಲಿಯಲ್ಲಿ ಇಡಿ ವಿಚಾರಣೆಗೆ ಒಳಗಾಗಿರುವ ಮಾಜಿ ಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಡರಾತ್ರಿವರೆಗೂ ವಿಚಾರಣೆ ಮಾಡಲು ನಡೆಸುವ ಸಾಧ್ಯತೆ ಇದೆ. ರಾತ್ರಿ ಹತ್ತು ಗಂಟೆಗೆ ಮೊದಲ ಸುತ್ತಿನ ವಿಚಾರಣೆ ಮುಗಿಸಿರುವ ಅಧಿಕಾರಿಗಳು ಊಟದ ನಂತರ ಎರಡನೇ ಸುತ್ತಿನ ವಿಚಾರಣೆ ನಡೆಸಲಿದ್ದಾರೆ.
ಜಾರಿ ನಿರ್ದೇಶನಾಲಯದ ಜಂಟಿ ಆಯುಕ್ತೆ ಮೋನಿಕಾ ಶರ್ಮಾ ನೇತೃತ್ವದಲ್ಲಿ ಐದು ಅಧಿಕಾರಿಗಳ ತಂಡ ಡಿಕೆಶಿ ಅವರನ್ನು ವಿಚಾರಣೆ ನಡೆಸುತ್ತಿದೆ. ದೆಹಲಿಯಲ್ಲಿ ಸಿಕ್ಕ ಹಣದ ಮೂಲ ಮತ್ತು ಅದರ ದಾಖಲೆ ಸುತ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ವೇಳೆ ಡಿಕೆಶಿ ಅವರು ಚಾರ್ಟೆಡ್ ಅಕೌಂಟೆಂಟ್ ಸಹಕಾರ ಪಡೆಯಲು ಅವಕಾಶ ಕೇಳಿದರು ಎನ್ನಲಾಗಿದೆ. ಫೋನ್ ಮೂಲಕ ಚಾರ್ಟೆಡ್ ಅಕೌಂಟೆಂಟ್ ಅವರ ಸಹಾಯ ಪಡೆಯಲು ಯತ್ನಿಸಿದ್ದಾರೆ. ಆದರೆ ಇಡಿ ಅಧಿಕಾರಿಗಳು ಡಿಕೆ ಶಿವಕುಮಾರ್ ಗೆ ಅನುಮತಿ ನಿರಾಕರಿಸಿದರು ಎನ್ನಲಾಗಿದೆ. ಡಿಕೆಶಿ ಜತೆ ಸಂಸದ ಡಿಕೆ ಸುರೇಶ್ ಇದ್ದಾರೆ. ಉಳಿದಂತೆ ಇ.ಡಿ. ಕಚೇರಿಗೆ ಎಲ್.ಆರ್.ಶಿವರಾಮೇಗೌಡ ಕೂಡ ಭೇಟಿ ನೀಡಿದ್ದಾರೆ.
ವಿಚಾರಣೆ ವೇಳೆಯೇ ಬಂಧಿಸುವ ಸಾಧ್ಯತೆ ಇರುವುದರಿಂದ ಡಿಕೆ ಶಿವಕುಮಾರ್ ಅವರು ಇಡಿ ಕಚೇರಿಗೆ ಮೂವರು ವಕೀಲರನ್ನು ಕರೆಸಿಕೊಂಡಿದ್ದಾರೆ. ಆದರೆ ವಕೀಲರ ಸಹಕಾರ ಪಡೆಯಲು ಅಧಿಕಾರಿಗಳು ಮಾತ್ರ ಒಪ್ಪಿಲ್ಲ. ತಮ್ಮನ್ನು ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಧೀಶರ ಮುಂದೆ ಹಾಜರುಪಡಿಸಬಹುದೆಂಬ ಭಯ ಡಿಕೆಶಿಗೆ ಎದುರಾಗಿದೆ. ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರೆ ವಾದ ಮಾಡಲು ವಕೀಲರನ್ನು ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.
ತಡರಾತ್ರಿವರೆಗೂ ವಿಚಾರಣೆ ನಡೆಸುವ ಹಿನ್ನೆಲೆಯಲ್ಲಿ ಇಡಿ ಕಚೇರಿಗೆ ಅಧಿಕಾರಿಗಳಿಗೆ ಹಾಗೂ ಡಿಕೆ ಶಿವಕುಮಾರ್ ಗೂ ಇಡಿ ಕಚೇರಿಯಲ್ಲೇ ಊಟದ ವ್ಯವಸ್ಥೆ ಮಾಡಲಾಗಿದೆ ಎರಡನೇ ಹಂತದ ವಿಚಾರಣೆಯಲ್ಲಿ ಡಿಕೆಶಿಗೆ ಅಧಿಕಾರಿಗಳು ಪಿನ್ ಟು ಪಿನ್ ಮಾಹಿತಿ ಕೇಳಲಿದ್ದಾರೆ ಎನ್ನಲಾಗಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ