ರಿಯಾದ್.ಆ,31: ಸೌದಿ ಅರೇಬಿಯಾದಲ್ಲಿ ಕೆಲಸದ ಸ್ಥಳಗಳಲ್ಲಿ ದೂಮಪಾನ ನಿಷೇಧ ಕಾನೂನು ಇಂದಿನಿಂದ ಜಾರಿಯಾಗಲಿದೆ. ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವರು ಕಳೆದ ತಿಂಗಳು ಕಾನೂನು ಜಾರಿ ಮಾರ್ಗಸೂಚಿಗಳಿಗೆ ಅಂತಿಮ ಅನುಮೋದನೆ ನೀಡಿದ್ದರು. ಹೊಸ ಕಾನೂನು ಉಲ್ಲಂಘಿಸುವವರಿಗೆ ಕಠಿಣ ದಂಡ ವಿಧಿಸಲಾಗುತ್ತದೆ.
ದೇಶದ ಕೆಲಸದ ಸ್ಥಳಗಳಲ್ಲಿ ಧೂಮಪಾನ ನಿಷೇಧವನ್ನು ಕಳೆದ ಶಅಬಾನ್ ತಿಂಗಳಲ್ಲಿ ಹೊರಡಿಸಲಾಗಿತ್ತು. ಈ ಆದೇಶದ ಅನುಷ್ಠಾನದ ಮಾರ್ಗಸೂಚಿಗಳಿಗಾಗಿ ಕಾರ್ಮಿಕ ಮತ್ತು ಸಾಮಾಜಿಕ ಅಭಿವೃದ್ಧಿ ಸಚಿವ ಅಹ್ಮದ್ ಬಿನ್ ಸುಲೈಮಾನ್ ಅಲ್ರಾಜಿ ಕಳೆದ ತಿಂಗಳು ಅಂತಿಮ ಅನುಮೋದನೆ ನೀಡಿದ್ದರು. ಮುಹರ್ರಂ 1ರಿಂದ(ಆ,31-2019) ಕಾನೂನು ಜಾರಿಗೆ ಬರಲಿದೆ.
ಹೊಸ ಕಾನೂನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ಕಠಿಣ ಶಿಕ್ಷೆಗಳನ್ನು ವಿಧಿಸಲಾಗುತ್ತದೆ. ರಾಷ್ಟ್ರೀಯ ತಂಬಾಕು ನಿರ್ಮೂಲನಾ ಸಮಿತಿಯ ಸಹಕಾರದೊಂದಿಗೆ ಶಿಫಾರಸುಗಳನ್ನು ನೀಡಲಾಗಿದೆ. ನಿರ್ಧಾರವನ್ನು ಕಾರ್ಯಗತಗೊಳಿಸಲು ಮಾಲೀಕರು ಮತ್ತು ಉದ್ಯೋಗಿಗಳಿಗೆ ಈಗಾಗಲೇ ಪ್ರಸ್ತಾಪಗಳನ್ನು ಹೊರಡಿಸಲಾಗಿದೆ. ಕಾರ್ಮಿಕರ ಆರೋಗ್ಯವನ್ನು ಕಾಪಾಡುವುದು, ಪರಿಸರವನ್ನು ರಕ್ಷಿಸುವುದು, ಕೆಲಸದ ಸಂಸ್ಥೆಗಳ ಆಸ್ತಿಯನ್ನು ರಕ್ಷಿಸುವುದು ಮತ್ತು ಉತ್ತಮ ಕೆಲಸದ ವಾತಾವರಣವನ್ನು ಸೃಷ್ಟಿಸುವುದು ಈ ನಿಷೇಧದ ಗುರಿಯಾಗಿದೆ.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ