ಒಮಾನ್: ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಅಧೀನದಲ್ಲಿ ತಿಂಗಳಿಗೊಮ್ಮೆ ನಡೆಯುವ ಮಾಸಿಕ ಮಹ್’ಳರತುಲ್ ಬದ್ರಿಯತ್ ಮಜ್ಲಿಸ್ ಮತ್ತು ಸೊಹಾರ್ ಝೋನ್ ಇದರ 3ನೇ ವಾರ್ಷಿಕ ಸ್ವಲಾತ್ ಮಜ್ಲಿಸ್ ಹಾಗೂ ಕೆಸಿಎಫ್ ಒಮಾನ್ ಅಂತರಾಷ್ಟ್ರೀಯ ನಾಯಕರಿಗೆ ಅಭಿನಂದನಾ ಕಾರ್ಯಕ್ರಮವು ದಿನಾಂಕ 29 ಆಗಸ್ಟ್ 2019, ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಸೊಹಾರ್ ಐಸಿಎಫ್ ಮದ್ರಸದಲ್ಲಿ ಜರುಗಿತು.

ಕೆಸಿಎಫ್ ಒಮಾನ್ ಗೌರವಾಧ್ಯಕ್ಷರಾದ ಬಹು. ಉಮರ್ ಸಖಾಫಿ ಉಸ್ತಾದ್ ಸ್ವಲಾತ್ ಮಜ್ಲಿಸ್ ಗೆ ನೇತೃತ್ವವನ್ನು ಕೊಟ್ಟು ಆಧ್ಯಾತ್ಮಿಕ ತರಗತಿಯನ್ನು ನಡೆಸಿಕೊಟ್ಟರು. ಕೆಸಿಎಫ್ ಅಂತರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಕಾರ್ಯದರ್ಶಿಯಾಗಿ ಆಯ್ಕೆಯಾದ ಬಹು. ಉಮರ್ ಸಖಾಫಿ ಉಸ್ತಾದ್, ಆಡಳಿತ ವಿಭಾಗದ ಕಾರ್ಯದರ್ಶಿಯಾಗಿ ಆಯ್ಕೆಯಾದ ಜನಾಬ್ ಇಕ್ಬಾಲ್ ಬರ್ಕ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಆಯ್ಕೆಯಾದ ಕೆಸಿಎಫ್ ಒಮಾನ್ ಅಧ್ಯಕ್ಷರಾದ ಜನಾಬ್ ಅಯ್ಯೂಬ್ ಕೋಡಿ ರವರನ್ನು ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ಮತ್ತು ಸೊಹಾರ್ ಝೋನ್ ವತಿಯಿಂದ ಸನ್ಮಾನಿಸಲಾಯಿತು.ಕೆಸಿಎಫ್ ಸೊಹಾರ್ ಝೋನ್ ಅಧ್ಯಕ್ಷರಾದ ಸಾದಿಕ್ ಕಾಟಿಪಳ್ಳ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಸೆಯ್ಯಿದ್ ಸೈಫುದ್ದೀನ್ ತಂಙಳ್ ರವರು ಉದ್ಘಾಟಿಸಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಕೆಸಿಎಫ್ ಕಾರ್ಯಕರ್ತರ ಕುಟುಂಬದಲ್ಲಿ ಮರಣಹೊಂದಿದವರ ಮೇಲೆ ಹೇಳಿದ ತಹ್ಲೀಲ್ ಹಾಗೂ ಖುರ್’ಆನ್ ಪಾರಾಯಣ ವನ್ನು ಹದಿಯಮಾಡಿ ಅವರ ಪಾರತ್ರಿಕ ಮೋಕ್ಷಕ್ಕಾಗಿ ಪ್ರಾರ್ಥಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ನಾಯಕರು, ವಿವಿಧ ಝೋನ್ ಗಳ ನಾಯಕರು ಹಾಗೂ ಕೆಸಿಎಫ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಸಾದಿಕ್ ಕಾಟಿಪಳ್ಳ ರವರು ಸ್ವಾಗತಿಸಿದ ಕಾರ್ಯಕ್ರಮವನ್ನು ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ಶಿಕ್ಷಣ ವಿಭಾಗದ ಅಧ್ಯಕ್ಷರಾದ ಉಬೈದ್ ಸಖಾಫಿ ಉಸ್ತಾದರು ನಿರೂಪಿಸಿದರು.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ