janadhvani

Kannada Online News Paper

370ನೆ ವಿಧಿ ರದ್ದತಿ: ಮುಂದುವರಿದ ಉದ್ವಿಗ್ನ ಸ್ಥಿತಿ- ಜನಜೀವನ ಅಸ್ತವ್ಯಸ್ತ

ಶ್ರೀನಗರ:- ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಭಾರತೀಯ ಸಂವಿಧಾನದ 370ನೆ ವಿಧಿ ರದ್ದತಿ ನಂತರ ಕಣಿವೆ ಪ್ರಾಂತ್ಯದಲ್ಲಿ ಉದ್ವಿಗ್ನ ಸ್ಥಿತಿ ಮುಂದುವರಿದಿದೆ. ನಿರ್ಬಂಧಗಳನ್ನು ಸಡಿಲಗೊಳಿಸಿ ಜನಜೀವನ ಸಹಜ ಸ್ಥಿತಿಗೆ ಮರಳಲು ಅವಕಾಶ ಕಲ್ಪಿಸಿದರೂ ಕೂಡ ರಾಜಧಾನಿ ಶ್ರೀನಗರ ಸೇರಿದಂತೆ ಪ್ರಾಂತ್ಯದ ವಿವಿಧೆಡೆ ಬಿಗುವಿನ ವಾತಾವರಣ ಮುಂದುವರಿದಿದೆ.

28ನೆ ದಿನವಾದ ಇಂದು ಕೂಡ ಜನಜೀವನ ಅಸ್ತವ್ಯಸ್ತಗೊಂಡಿದೆ. ಇಂದು 11 ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಒಟ್ಟು 105 ಪೊಲೀಸ್ ಠಾಣೆಗಳ ಪೈಕಿ 82 ಸ್ಟೇಷನ್‍ಗಳ ಸರಹದ್ದಿನಲ್ಲಿ ನಿರ್ಬಂಧ ತೆರವುಗೊಳಿಸಿ ಸಹಜ ಜನಜೀವನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಆದರೆ, ಜನರು ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಮತ್ತು ರಸ್ತೆಗಳಲ್ಲಿ ಓಡಾಡಲು ಹಿಂದೇಟು ಹಾಕುತ್ತಿದ್ದಾರೆ.