ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣದ ವಿಚಾರವಾಗಿ ಬಂಧಿತರಾಗಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ, ತಿಹಾರ್ ಜೈಲಿಗೆ ತೆರೆಳುವ ಮುನ್ನ ತಮಗೆ ಆರ್ಥಿಕತೆ ಬಗ್ಗೆ ಮಾತ್ರ ಚಿಂತೆಯಾಗಿದೆ ಎಂದರು. ಆ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆರ್ಥಿಕ ಕುಸಿತದ ವಿಚಾರವಾಗಿ ವ್ಯಂಗ್ಯವಾಡಿದ್ದಾರೆ.
ಪಿ.ಚಿದಂಬರಂ ಈ ವಾರದ ಆರಂಭದಲ್ಲಿ ಸರ್ಕಾರದ ವಿರುದ್ಧ ಆರ್ಥಿಕ ಕುಸಿತದ ವಿರುದ್ದ ವ್ಯಂಗ್ಯವಾಡುತ್ತಾ ‘5 ಪರ್ಸೆಂಟ್ ‘ಎಂದು ಹೇಳಿದ್ದರು. ಇಂದು ಐಎನ್ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಸೆಪ್ಟೆಂಬರ್19 ರವರೆಗೆ ಮಾಜಿ ಸಚಿವರು ತಿಹಾರ್ ಜೈಲಿಗೆ ಹೋಗಬೇಕಾಗುತ್ತದೆ ಎಂದು ವಿಶೇಷ ನ್ಯಾಯಾಧೀಶ ಅಜಯ್ ಕುಮಾರ್ ಕುಹಾರ್ ಘೋಷಿಸಿದ ಕೆಲವೇ ನಿಮಿಷಗಳಲ್ಲಿ ಮಾತನಾಡುತ್ತಾ ‘ ನನಗೆ ಆರ್ಥಿಕತೆ ಬಗ್ಗೆ ಮಾತ್ರ ಚಿಂತೆಯಾಗಿದೆ’ ಎಂದು ಹೇಳಿದರು.
ಮಂಗಳವಾರದಂದು ಸಿಬಿಐ ಚಿದಂಬರಂ ಅವರ ಬಂಧನವನ್ನು ವಿಸ್ತರಿಸಿದ ನಂತರ ಅವರು ಏನಾದರೂ ಹೇಳಲು ಬಯಸುತ್ತೀರಾ? ಎಂದು ಮಾಧ್ಯಮದವರು ಕೇಳಿದಾಗ ಚಿದಂಬರಂ ಕೈ ಎತ್ತಿ 5 ಪರ್ಸೆಂಟ್ ಎಂದು ಹೇಳಿದ್ದರು. ಇನ್ನು ಮುಂದುವರೆದು 5 ಪರ್ಸೆಂಟ್ ಅಂದ್ರೆ ನಿಮಗೆ ಏನು ಅಂತಾ ತಿಳಿದಿದೆಯೇ? ಎಂದು ಮರು ಪ್ರಶ್ನಿಸಿದ್ದರು. ಇತ್ತಿಚೀಗೆ ಕೇಂದ್ರ ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕಳೆದ ಆರು ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆ ದರ ಶೇಕಡಾ 5ಕ್ಕೆ ಇಳಿದಿದೆ.ಈ ಹಿನ್ನಲೆಯಲ್ಲಿ ಚಿದಂಬರಂ ವ್ಯಂಗ್ಯವಾಡಿದ್ದರು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ