100 ದಿನ ಪೂರೈಸಿದ ಅಭಿವೃದ್ಧಿ ಶೂನ್ಯ ಸರ್ಕಾರಕ್ಕೆ ಧನ್ಯವಾದ- ರಾಹುಲ್

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರ 100 ದಿನಗಳು ಪೂರೈಸಿದ್ದು ಈ ಅವಧಿಯಲ್ಲಿ ಸರ್ಕಾರದ ಮಟ್ಟದಲ್ಲಿ ನಡೆದ ಬೆಳವಣಿಗೆಗಳ ಕುರಿತು ಕೇಂದ್ರ ಸರ್ಕಾರ ಪ್ರಕಟಣೆ ನೀಡಿತ್ತು ಇದಕ್ಕೆ ಕಾಂಗ್ರೆಸ್ ಲೇವಡಿ ಮಾಡಿದೆ.

ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ನೂರು ದಿನಗಳ ಯಾವುದೇ ಅಭಿವೃದ್ಧಿ ಕೆಲಸಗಳು ಆಗಿಲ್ಲ. ನಾಯಕತ್ವದ ಕೊರತೆ ಮತ್ತು ಸರ್ಕಾರವನ್ನು ಟೀಕಿಸುವ ಮಾಧ್ಯಮಗಳ ಕತ್ತು ಹಿಸುಕುವ ಪ್ರಯತ್ನಗಳು ನಡೆಸುತ್ತಿವೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರ್ಕಾರವನ್ನು ಟೀಕಿಸಿದ್ದಾರೆ.

ಟ್ವೀಟ್ ನಲ್ಲಿ 100 ದಿನ ಅಭಿವೃದ್ಧಿ ಇಲ್ಲ ಎಂದು ಟ್ವೀಟ್ ಮಾಡಿ ಧನ್ಯವಾದ ಹೇಳಿರುವ ರಾಹುಲ್ ಗಾಂಧಿ, ಪ್ರಜಾಪ್ರಭುತ್ವ ವಿರೋಧಿ ಧೋರಣೆ. ಮಾಧ್ಯಮಗಳ ಧ್ವನಿ ದಮನ. ಯೋಜನೆಗಳ ಕೊರತೆ, ಸೂಕ್ತ ನಾಯಕತ್ವದ ಕೊರತೆಯಿಂದ ಆರ್ಥಿಕ ಮುಗ್ಗಟ್ಟಿಗೆ ಕಾರಣವಾಗಿದೆ ಎಂದು ಕೇಂದ್ರದ ವಿರುದ್ಧ ರಾಹುಲ್ ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!