ಬೆಂಗಳೂರು:- ರಾಜೀನಾಮೆ ನೀಡಿದ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಭಾರತದಲ್ಲಿರುವ ಬದಲು ಪಾಕಿಸ್ತಾನಕ್ಕೆ ವಲಸೆ ಹೋಗುವುದೇ ಸೂಕ್ತ, ಇಲ್ಲೇ ಇದ್ದು ದೇಶ ಒಡೆಯುವ ಬದಲು, ಪಾಕಿಸ್ತಾನಕ್ಕೆ ಹೋಗಿ ನಮ್ಮ ದೇಶದ ವಿರುದ್ದ ಹೋರಾಟ ಮಾಡಲಿ ಎಂದು ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಟ್ವೀಟ್ ಮಾಡುವ ಮೂಲಕ ಗುಡುಗಿದ್ದಾರೆ.
ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು! ಇದು ಪ್ರಾಯೋಗಿಕವಾಗಿಯು ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರು ನೀಯತ್ತು ತೋರಿಸಲಿ. pic.twitter.com/unYJBBaKyz
— Anantkumar Hegde (@AnantkumarH) September 8, 2019
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ಈತ ಮಾಡಬೇಕಾದ ಮೊದಲ ಕೆಲಸವೆಂದರೆ ಕೂಡಲೇ ತನ್ನ ನಿಲುವನ್ನು ಬೆಂಬಲಿಸಿದವರೊಂದಿಗೆ ಪಾಕಿಸ್ತಾನಕ್ಕೆ ವಲಸೆ ಹೋಗುವುದು! ಇದು ಪ್ರಾಯೋಗಿಕವಾಗಿಯು ಸುಲಭ ಮತ್ತು ಅಂತಿಮ ಪರಿಹಾರ ಕೂಡ. ಇಲ್ಲೇ ಇದ್ದು ದೇಶ ಒಡೆಯುವ ಬದಲು, ಅಲ್ಲಿಗೆ ಹೋಗಿ ನಮ್ಮ ದೇಶ ಮತ್ತು ನಮ್ಮ ಸರ್ಕಾರದ ವಿರುದ್ಧ ನೇರ ಹೋರಾಟ ಮಾಡುವುದು ಒಳಿತು! ಇದರಲ್ಲಾದರು ನಿಯತ್ತು ತೋರಿಸಲಿ” ಎಂದು ವ್ಯಂಗ್ಯವಾಡಿದ್ದಾರೆ.