ಬೆಂಗಳೂರು: ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಜಾರಿಗೊಳಿಸಿದ ನೂತನ ಮೋಟಾರು ವಾಹನ ಕಾಯ್ದೆಯ ದುಬಾರಿ ದಂಡ ಪ್ರಮಾಣವನ್ನು ಕಡಿತಗೊಳಿಸಲು ಸೂಚಿಸಿದೆ.
ಸಿಎಂ ಕಚೇರಿಯಲ್ಲಿ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಜನಸಾಮಾನ್ಯರಿಗೆ ದುಬಾರಿ ದಂಡದಿಂದ ತೀವ್ರ ತೊಂದರೆಯುಂಟಾಗುತ್ತಿದೆ. ಕೂಡಲೇ ದಂಡ ಇಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗುಜರಾತ್ ಸರ್ಕಾರ ಹೊರಡಿಸಿರುವ ಆದೇಶವನ್ನು ತರಿಸಿಕೊಂಡು ಪರಿಶೀಲನೆ ನಡೆಸಲಾಗುವುದು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕಾಯ್ದೆಯನ್ನು ರಾಜ್ಯ ಸರ್ಕಾರಗಳು ಮಾರ್ಪಡಿಸುವ, ಬದಲಿಸುವ ಅಧಿಕಾರ ಹೊಂದಿರುತ್ತದೆ. ಈ ನಿಟ್ಟಿನಲ್ಲಿ ದಂಡದ ದರಗಳನ್ನು ಕಡಿತಗೊಳಿಸಲಾಗುತ್ತದೆ’ ಎಂದು ಸಿಎಂ ತಿಳಿಸಿದರು.
ಇಳಿಕೆಯಾಗುವ ದರಗಳ ಸುತ್ತೋಲೆಯನ್ನು ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುತ್ತದೆ. ನೂತನ ಕಾಯ್ದೆ ಸಾರ್ವಜನಿಕರಿಗೆ ವಿಪರೀತ ಹೊರೆಯಾಗಿತ್ತು. ರಾಜ್ಯದ ನಾನಾ ಭಾಗಗಳಲ್ಲಿನ ಸವಾರರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.