ರಿಯಾದ್: ಅರಾಮ್ಕೊ ತೈಲ ಸಂಸ್ಕರಣಾಗಾರದ ಮೇಲಿನ ದಾಳಿಯ ಹಿಂದೆ ಇರಾನ್ ಕೈವಾಡವಿದೆ ಎಂದು ಸೌದಿ ಅರೇಬಿಯಾ ಖಚಿತಪಡಿಸಿದೆ. ಇದನ್ನು ಸಾಬೀತುಪಡಿಸುವ ಸಾಕ್ಷ್ಯಗಳನ್ನು ಸೌದಿ ಅರೇಬಿಯಾ ಬಿಡುಗಡೆ ಮಾಡಿದೆ.
ಅರಾಮ್ಕೊ ದಾಳಿಗೆ ಬಳಸಲಾದ ಕ್ಷಿಪಣಿಗಳ ಅವಶೇಷಗಳನ್ನು ಸೌದಿ ಪ್ರದರ್ಶಿಸಿದೆ. ರಕ್ಷಣಾ ಇಲಾಖೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಸಾಕ್ಷ್ಯವನ್ನು ಬಿಡುಗಡೆ ಮಾಡಿದೆ. ದಾಳಿಯಲ್ಲಿ ಬಳಸಿದ ಡ್ರೋನ್ ಮತ್ತು ಕ್ಷಿಪಣಿಗಳ ಆಧಾರದಿಂದ ದಾಳಿಯ ಹಿಂದೆ ಇರಾನ್ ಇದೆ ಎಂಬುದು ಸಂಶಯಾತೀತವಾಗಿ ದೃಢಪಟ್ಟಿದೆ ಎಂದು ಸೌದಿ ರಕ್ಷಣಾ ಸಚಿವಾಲಯ ಹೇಳಿದೆ.
ದಾಳಿಯಲ್ಲಿ 18 ಡ್ರೋನ್ಗಳು ಮತ್ತು ಏಳು ಕ್ರೂಸ್ ಕ್ಷಿಪಣಿಗಳನ್ನು ಬಳಸಲಾಯಿತು. ಇವು ಯೆಮೆನ್ನಿಂದ ಅರಾಮ್ಕೊ ವಿರುದ್ಧ ಬಳಸಲ್ಪಟ್ಟವು. ಯೆಮನ್ನಲ್ಲಿ ಇರಾನಿನ ಬೆಂಬಲಿತ ಹೂತಿ ಬಂಡುಕೋರರು ಈ ದಾಳಿಯನ್ನು ತಾನು ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ.
ಅರಾಮ್ಕೊ ದಾಳಿಯ ಹಿಂದೆ ಇರಾನ್ ಕೈವಾಡವಿದೆ ಎಂದು ಅಮೆರಿಕ ಈ ಹಿಂದೆ ಆರೋಪಿಸಿತ್ತು. ಇರಾನ್ ಆರೋಪಗಳನ್ನು ನಿರಾಕರಿಸಿದೆ ಮತ್ತು ಯಾವುದೇ ಮಿಲಿಟರಿ ಕ್ರಮ ಉಂಟಾದರೆ ಪ್ರತಿದಾಳಿ ನಡೆಸಲಾಗುವುದು ಎಂದು ಎಚ್ಚರಿಸಿದೆ.
ಸೌದಿ ರಕ್ಷಣಾ ಸಚಿವಾಲಯದ ವಕ್ತಾರ ಕರ್ನಲ್ ತುರ್ಕಿ ಅಲ್-ಮಾಲಿಕಿ ಮಾತನಾಡಿ, ಸೌದಿಗೆ ಎಲ್ಲಿಂದ ದಾಳಿ ನಡೆಸಲಾಗಿದೆ ಎಂಬುದನ್ನು ದೃಢಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು. ಡ್ರೋನ್ಗಳಲ್ಲಿನ ಕಂಪ್ಯೂಟರ್ಗಳಿಂದ ಸಂಗ್ರಹಿಸಿದ ಮಾಹಿತಿಯಿಂದ ಅದು ಇರಾನ್ಗೆ ಸೇರಿದ್ದು ಎಂವುದು ಸ್ಪಷ್ಟವಾಗಿದೆ ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.















ಇನ್ನಷ್ಟು ಸುದ್ದಿಗಳು
ದುಬೈ-ಇಸ್ರೇಲ್ ವಿಮಾನದಲ್ಲಿ ಪೈಲಟ್ಗಳ ನಡುವೆ ಸಂಘರ್ಷ : ಸೌದಿಯಲ್ಲಿ ತುರ್ತು ಭೂಸ್ಪರ್ಶ
ಅಣು-ವಿಕಿರಣ ಸೋರಿಕೆಯಾದರೆ ಏನು ಮಾಡಬೇಕು?; ಜಾಗರೂಕತೆಯ ಮಾರ್ಗದರ್ಶಿ ಸೂತ್ರಗಳನ್ನು ಬಿಡುಗಡೆ ಮಾಡಿದ CDAA
ಒಮಾನ್:ಕಾರ್ಮಿಕ ಕಾಯ್ದೆ ಉಲ್ಲಂಘನೆ ವಿರುದ್ಧ ಕಠಿಣ ಕ್ರಮ- ಫೀಲ್ಡ್ ತಪಾಸಣೆಗೆ ಮುಂದಾದ ಕಾರ್ಮಿಕ ಸಚಿವಾಲಯ
ರಸ್ತೆ ಬದಿಯ ಪೈಪ್ ಸರಿಪಡಿಸಿದ ಭಾರತೀಯ ಡೆಲಿವರಿ ಯುವಕ – ದುಬೈ ಸರ್ಕಾರದ ಗೌರವ
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ