ಬೆಂಗಳೂರು: ಉಪಚುನಾವಣೆ ಎದುರಿಸಲು ಕಾಂಗ್ರೆಸ್ ಸಿದ್ಧವಾಗಿದ್ದು, ಕ್ಷೇತ್ರದ ಜನತೆ ನ್ಯಾಯದ ಪರ ಮತ ಚಲಾವಣೆ ಮಾಡಲಿದ್ದು ನಮಗೆ ಗೆಲುವು ಸಿಗಲಿದೆ ಎಂಬ ವಿಶ್ವಾಸವನ್ನು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ,15 ಕ್ಷೇತ್ರಗಳಲ್ಲಿನ ವಾತಾವರಣ ನೋಡಿದರೆ ಎಲ್ಲಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ. ನಮ್ಮ ಪಕ್ಷದ ನಾಯಕರು ನಡೆಸಿದ ಸಮೀಕ್ಷೆ, ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸಬೇಕೆಂಬ ಜನರ ನಿರ್ಧಾರ ಹಾಗೂ ಬಿಜೆಪಿಯಲ್ಲೇ ಒಂದಿಷ್ಟು ವಿರೋದಾಭಾಷಗಳು ಕೇಳಿ ಬರುತ್ತಿವೆ.
ಹಲವು ಕ್ಷೇತ್ರದಲ್ಲಿ ಹೊಂದಾಣಿಕೆ ಇಲ್ಲ. ನಮ್ಮವರನ್ನು ಗೆಲ್ಲಿಸಬೇಕು, ಪಕ್ಷ ಬಿಟ್ಟವರಿಗೆ ತಕ್ಕ ಪಾಠ ಕಲಿಸಬೇಕೆಂದು ನಮ್ಮ ಕಾರ್ಯಕರ್ತರು ನಿರ್ಧಾರ ಮಾಡಿದ್ದಾರೆ. ಈ ಎಲ್ಲಾ ಕಾರಣದಿಂದ ನಮಗೆ ಗೆಲುವಿಗೆ ಧನಾತ್ಮಕವಾಗಿ ಪರಿಣಮಿಸಲಿದೆ . ಇದರಿಂದ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸ ಇದೆ ಎಂದರು.ನಾವು ಎಲ್ಲಾ ಕ್ಷೇತ್ರದಲ್ಲಿಯೂ ಇದಾಗಲೇ ಚುನಾವಣಾ ತಯಾರಿ ನಡೆಸಿದ್ದು ಹೊಸಕೋಟೆಯಲ್ಲಿ ಸ್ವಾಭಿಮಾನಿ ಸಮಾವೇಶ ಮಾಡಿದ್ದೇವೆ. ಶೇ.90 ರಷ್ಟು ಕಾಂಗ್ರೆಸ್ ಕಾರ್ಯಕರ್ತರು ಇದರಲ್ಲಿ ಭಾಗವಹಿಸಿದ್ದಾರೆ ಎಂದರು.
ಬಿಜೆಪಿ ಆಪರೇಷನ್ ಕಮಲ ಮಾಡಿ ಮೈತ್ರಿ ಸರ್ಕಾರವನ್ನು ಉರುಳಿಸಿದೆ ಎನ್ನುವುದು ಇಡೀ ರಾಜ್ಯಕ್ಕೆ ತಿಳಿದ ಸಂಗತಿ. ಅನರ್ಹ ಶಾಸಕರ ಭವಿಷ್ಯ ತೂಗುಯ್ಯಾಲೆಯಲ್ಲಿದೆ. ಸ್ಪೀಕರ್ ಆದೇಶದ ಪ್ರಕಾರ 15 ವಿಧಾನಸಭೆಯಲ್ಲಿ ಅನರ್ಹರು ಸ್ಪರ್ಧೆ ಮಾಡಲು ಸಾಧ್ಯವಿಲ್ಲ. ನಾವೀಗಾಗಲೇ ಕೇವಿಯಟ್ ಹಾಕಿದ್ದೇವೆ, ಸುಪ್ರೀಂನಲ್ಲಿ ಪ್ರಬಲ ವಾದ ಮಂಡಿಸುತ್ತೇವೆ, ಎಲ್ಲರೂ ಕೂಡಿ ಚುನಾವಣೆ ಎದುರಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ