ಸೆ.25 ಕ್ಕೆ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ಆದೇಶ

ನವದೆಹಲಿ: ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ಆದೇಶವನ್ನು ಸೆಪ್ಟೆಂಬರ್ 25ರ ಮಧ್ಯಾಹ್ನ 3-30ಕ್ಕೆ ಆದೇಶ ಪ್ರಕಟಿಸುವುದಾಗಿ ದೆಹಲಿ ರೋಸ್ ಅವೆನ್ಯೂ ಕೋರ್ಟ್ ಶನಿವಾರ ತಿಳಿಸಿದೆ.

ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ನ್ಯಾಯಾಂಗ ಬಂಧನದಲ್ಲಿದ್ದ ಡಿಕೆ ಶಿವಕುಮಾರ್ ಜಾಮೀನು ಕೋರಿ ರೋಸ್ ಅವೆನ್ಯೂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಡಿಕೆ ಶಿವಕುಮಾರ್ ಗೆ ಪರವಾಗಿ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ, ಮುಕುಲ್ ರೋಹ್ಟಗಿ ವಾದ ಮಂಡಿಸಿದ್ದರು. ಜಾರಿ ನಿರ್ದೇಶನಾಲಯದ ಪರವಾಗಿ ಎಎಸ್ ಜಿ ನಟರಾಜ್ ಅವರು ಪ್ರತಿವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com
error: Content is protected !!