ಬಳ್ಳಾರಿ ,ಸೆ. 27:ಅನರ್ಹ ಶಾಸಕರು ತಮ್ಮ ಪ್ರಕರಣದ ತೀರ್ಪು ಹೊರಬಿದ್ದ ಕೂಡಲೆ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ.ಕಾಂಗ್ರೆಸ್-ಜೆಡಿಎಸ್ ಪಕ್ಷದ ಹಲವು ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಿ ಮೈತ್ರಿ ಸರ್ಕಾರ ಉರುಳಿದ ನಂತರ ಎರಡೂ ಪಕ್ಷದಲ್ಲಿ ಭಿನ್ನಮತ ಹೆಚ್ಚಾಗಿದೆ.
ಇನ್ನೊಂದೆಡೆ ಜೆಡಿಎಸ್ ಪಕ್ಷದಲ್ಲಿ ಜಿ.ಟಿ. ದೇವೇಗೌಡ, ಎಸ್.ಆರ್. ಶ್ರೀನಿವಾಸ್ ಸೇರಿದಂತೆ ಕೆಲವು ನಾಯಕರು ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಾಗಿದೆ. ಈ ನಡುವೆ ಕಾಂಗ್ರೆಸ್ನಲ್ಲಿ ಕೂಡ ಭಿನ್ನಮತ ಹೆಚ್ಚಾಗುತ್ತಿದೆ.
ಆಪರೇಷನ್ ಕಮಲ ನಡೆಸಿ ಕಾಂಗ್ರೆಸ್ ಶಾಸಕರನ್ನು ಮುಂಬೈ ಹೋಟೆಲ್ನಲ್ಲಿರಿಸಿರುವ ಬಿಜೆಪಿ ಕೈ ಶಾಸಕರಿಗೆ ಕೋಟಿಗಟ್ಟಲೆ ಹಣ ನೀಡಿದೆ ಎಂದು ಆಕ್ರೋಶ ಹೊರಹಾಕಿದ್ದ ಕಾಂಗ್ರೆಸ್ ನಾಯಕ ಅನಿಲ್ ಲಾಡ್ ಇದೀಗ ಬಿಜೆಪಿ ಸೇರಲು ಸಿದ್ಧರಾಗಿದ್ದಾರೆ. ಈ ಮೂಲಕ ಅನಿಲ್ ಲಾಡ್ ಅವರಿಂದಲೇ ಕಾಂಗ್ರೆಸ್ನಲ್ಲಿ ಮತ್ತೊಮ್ಮೆ ರಾಜೀನಾಮೆ ಪರ್ವ ಆರಂಭವಾಗುವ ಸಾಧ್ಯತೆಯಿದೆ. ಈ ಬೆನ್ನಲ್ಲೇ ಮಾಜಿ ಸಚಿವ ಹಾಗೂ ಮಂಗಳೂರು ಶಾಸಕ ಯು.ಟಿ. ಖಾದರ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಬಳ್ಳಾರಿ ಕಾಂಗ್ರೆಸ್ ಮಾಜಿ ಶಾಸಕ ಅನಿಲ್ ಲಾಡ್ ಬಿಜೆಪಿ ಸೇರಲು ನಿರ್ಧರಿಸಿದ್ದು, ಈ ಬಗ್ಗೆ ತಮ್ಮ ಕಾರ್ಯಕರ್ತರಿಗೆ ಮೆಸೇಜ್ ಕಳಿಸಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿಗೆ ಸೇರಲು ಯೋಚಿಸಿದ್ದೇನೆ. ನಿಮ್ಮ ಅಭಿಪ್ರಾಯವನ್ನು ತಿಳಿಸಿ ಎಂದು ಅನಿಲ್ ಲಾಡ್ ಕಾರ್ಯಕರ್ತರಿಗೆ ಮೆಸೇಜ್ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿರುವ ಬ್ರೂಸ್ಪೇಟೆ ಬ್ಲಾಕ್ ಕಾಂಗ್ರೆಸ್ ವಾಟ್ಸಾಪ್ ಗ್ರೂಪ್ಗೆ ಅನಿಲ್ ಲಾಡ್ ಮೆಸೇಜ್ ಕಳುಹಿಸಿದ್ದಾರೆ.
ಸದ್ಯದ ಮಾಹಿತಿ ಪ್ರಕಾರ, ಬಳ್ಳಾರಿಯ ಕಾಂಗ್ರೆಸ್ ನಾಯಕ ಅನಿಲ್ ಲಾಡ್ ಬಿಜೆಪಿ ಸೇರುವುದು ಖಚಿತ ಎನ್ನಲಾಗುತ್ತಿದೆ. ಸಿಎಂ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಅನಿಲ್ ಲಾಡ್ ಬಿಜೆಪಿ ಸೇರಲಿದ್ದಾರೆ. ಈ ಬಗ್ಗೆ ಖಚಿತಪಡಿಸಿರುವ ಅನಿಲ್ ಲಾಡ್, ಸೋಮವಾರ ಮುಖ್ಯಮಂತ್ರಿಯನ್ನು ಭೇಟಿ ಮಾಡಲಿದ್ದೇನೆ. ಈಗಾಗಲೇ ಈ ಬಗ್ಗೆ ಸಚಿವ ಶ್ರೀರಾಮುಲು ಅವರ ಜೊತೆ ಚರ್ಚೆ ನಡೆಸಿದ್ದೇನೆ. ಯಾವುದೇ ಷರತ್ತುಗಳಿಲ್ಲದೆ ಬಿಜೆಪಿ ಸೇರ್ಪಡೆಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ