ಡಿಸೆಂಬರ್ 5ಕ್ಕೆ ಉಪಚುನಾವಣೆ- ಡಿ.9ಕ್ಕೆ ಫಲಿತಾಂಶ

ನವದೆಹಲಿ: ಅನರ್ಹ ಶಾಸಕರ ಅನರ್ಹತೆ ವಿಚಾರಣೆ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿರುವುದರಿಂದ ಕೇಂದ್ರ ಚುನಾವಣಾ ಆಯೋಗ 15 ಕ್ಷೇತ್ರಗಳ ಉಪ ಚುನಾವಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಿದೆ.

ಈ ಹಿಂದೆ ರಾಜ್ಯ ಚುನಾವಣಾ ಆಯೋಗ ಅಕ್ಟೋಬರ್ 21ರಂದು ಉಪ ಚುನಾವಣೆಯ ದಿನಾಂಕವನ್ನು ಘೋಷಿಸಿತ್ತು. ಆದರೆ ಅನರ್ಹತೆ ಪ್ರಕರಣದ ವಿಚಾರಣೆ ಕುರಿತು ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿರುವುದರಿಂದ ತ್ವರಿತಗತಿಯಲ್ಲಿ ಮಧ್ಯಂತರ ಆದೇಶ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಇನ್ನು ನಿನ್ನೆ ಸುಪ್ರೀಂ ಕೋರ್ಟ್ ನಲ್ಲಿ ನಡೆದ ವಿಚಾರಣೆ ವೇಳೆ ಕೇಂದ್ರ ಚುನಾವಣಾ ಆಯೋಗದ ವಕೀಲರು ಈ ಹಿಂದೆ ಘೋಷಿಸಿದ್ದ ಚುನಾವಣೆಯ ದಿನಾಂಕವನ್ನು ಮುಂದೂಡುವುದಾಗಿ ಹೇಳಿತ್ತು. ಅದೇ ರೀತಿ ಅಕ್ಟೋಬರ್ 21ರಂದು ನಡೆಯಬೇಕಿದ್ದ ಚುನಾವಣೆಯನ್ನು ಡಿಸೆಂಬರ್ 5ಕ್ಕೆ ಮುಂದೂಡಿದೆ.

ಕೆ.ಆರ್ ಪುರಂ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೃಷ್ಣರಾಜಪೇಟೆ, ಹುಣಸೂರಿನಲ್ಲಿ ಉಪ ಚುನಾವಣೆ ನಡೆಯಲಿದ್ದು ಈ ಎಲ್ಲಾ ಕ್ಷೇತ್ರಗಳಲ್ಲಿ ಚುನಾವಣೆ ನೀತಿ ಸಂಹಿತೆ ಜಾರಿಗೆ ಬರಲಿದೆ.

ನವೆಂಬರ್ 11ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭ ನವೆಂಬರ್ 18 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ನವೆಂಬರ್ 19ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ.
ನವೆಂಬರ್ 21ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಡಿಸೆಂಬರ್ 5ರಂದು ಮತದಾನ ನಡೆಯಲಿದೆ.
ಡಿಸೆಂಬರ್ 9ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ.

Leave a Reply

Your email address will not be published. Required fields are marked *

WP Twitter Auto Publish Powered By : XYZScripts.com
error: Content is protected !!