ಮಂಗಳೂರು: ಸುನ್ನಿ ಶಿಕ್ಷಕರ ಸಂಘ ದಕ್ಷಿಣ ಕನ್ನಡ ಜಿಲ್ಲೆ (ಪಶ್ಚಿಮ) ಇದರ ಸುನ್ನೀ ಬಾಲ ಸಂಘ SBS ಇದರ ಪ್ರತಿನಿಧಿ ಸಮಾವೇಶವು 2019 ಅಕ್ಟೋಬರ್ 12 ರಂದು ಬಿ.ಸಿ.ರೋಡ್ ಸ್ಪರ್ಶಾ ಸಭಾಂಗಣದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.
“ ನಮ್ಮ ಮಕ್ಕಳು ನಾಳೆಯ ಸಂಪತ್ತು” ಎಂಬ ಘೋಷವಾಕ್ಯದೊಂದಿಗೆ ನಡೆಯುವ ಸಮಾವೇಶದ ಲೋಗೋವನ್ನು ಪಡೀಲಿನಲ್ಲಿ ನಡೆದ ಸಭೆಯಲ್ಲಿ ಶಿಕ್ಷಕ ಒಕ್ಕೂಟದ ಉಪಾಧ್ಯಕ್ಷ O.K. ಸಈದ್ ಮುಸ್ಲಿಯಾರ್ ಬಿಡುಗಡೆಗೊಳಿಸಿದರು.
ಈ ಸಮಾವೇಶದಲ್ಲಿ ಜಿಲ್ಲೆಯ ಪ್ರತಿ ಮದ್ರಸಗಳಿಂದ ನಿಗದಿತ 3 ಮಂದಿ ಭಾಗವಹಿಸಲಿದ್ದು ಸಂಪನ್ಮೂಲ ವ್ಯಕ್ತಿಗಳಿಂದ 2 ತರಗತಿಗಳು ನಡೆಯಲಿದೆ.
ಸಮಾವೇಶವು ಜಿಲ್ಲಾಧ್ಯಕ್ಷ ಪಿ.ಎಂ.ಮುಹಮ್ಮದ್ ಮದನಿಯವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಸುನ್ನೀ ಸಂಘ ಕುಟುಂಬದ ನಾಯಕರು ಗಣ್ಯರು ಭಾಗವಹಿಸಲಿದ್ದಾರೆ.ಅಪರಾಹ್ನ 2:30 ಬಿ.ಸಿ. ರೋಡಿನಲ್ಲಿ SBS ವಿದ್ಯಾರ್ಥಿಗಳಿಂದ ಆಕರ್ಷಕ ಬಾಲ ಸಂಚಯನ ಜಾಥಾ ನಡೆಯಲಿದೆ ಎಂದು ಶಿಕ್ಷಕರ ಒಕ್ಕೂಟ ಜಿಲ್ಲಾ ಕಾರ್ಯದರ್ಶಿ ಇಬ್ರಾಹಿಂ ಖಲೀಲ್ ಮುಸ್ಲಿಯಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಆಗಸ್ 12.ಎಸ್ ವೈ ಎಸ್ ದ.ಕ ವೆಸ್ಟ್ ಜಿಲ್ಲೆ:ಹುಬ್ಬುರ್ರಸೂಲ್ ಕಾನ್ಫರೆನ್ಸ್
ನಕಲಿ ತ್ವರೀಖತ್ಗಳ ಬಗ್ಗೆ ಎಚ್ಚರಿಕೆ ಅಗತ್ಯ: ಹಿಮಮಿ ಸಂಗಮ
ದಕ್ಷಿಣ ಕನ್ನಡ ವೆಸ್ಟ್ ಜಿಲ್ಲೆ ಸಮಸ್ತ ಸೆಂಟಿನರಿ EC (ಎಕ್ಸಿಕ್ಯೂಟೀವ್ ಕೌನ್ಸಿಲ್) ಅಸ್ತಿತ್ವಕ್ಕೆ
ಸಂಕಷ್ಟಕ್ಕೆ ಸಿಲುಕಿದ ವ್ಯಕ್ತಿಗೆ ಆಸರೆಯಾದ ಕೆಸಿಎಫ್ ಸಾಂತ್ವನ
ಮುಸ್ಲಿಂ ನಾಯಕರ ಕಡೆಗಣನೆ: ಕಾಂಗ್ರೆಸ್ ಪಕ್ಷ ಧೂಳಿಪಟ ದೂರವಿಲ್ಲ- ರಜ್ವಿ
ವಾಮಂಜೂರು: ಸಾಂತ್ವನ ಹಾಗೂ ಹಣ್ಣು ಹಂಪಲು ವಿತರಣೆ
ಮಂಗಳೂರು ಮೂಲದ ಶಾಜಹಾನ್ ರಸ್ತೆ ಅಪಘಾತದಲ್ಲಿ ಮರಣ
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ