ದುಬೈ: ಅನಾರೋಗ್ಯಕರ ಆಹಾರ ಮತ್ತು ವ್ಯಾಯಾಮದ ಕೊರತೆಯು ವಲಸಿಗರಲ್ಲಿ ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.
ಕೆಲಸದ ನಂತರ ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಸಮಯ ಕಳೆಯುವುದು ಆರೋಗ್ಯಕ್ಕೆ ಸವಾಲಾಗಿ ಪರಿಣಮಿಸುತ್ತದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.
ಸ್ಥೂಲಕಾಯತೆ, ಕಲೆಸ್ಟ್ರಾಲ್, ಅಧಿಕ ರಕ್ತದೊತ್ತಡ, ವ್ಯಾಯಾಮೇತರ ಜೀವನಶೈಲಿ, ಧೂಮಪಾನ ಮತ್ತು ಅತಿಯಾದ ಆಲ್ಕೊಹಾಲ್ ಸೇವನೆಯು ಹೃದಯದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ರಕ್ತನಾಳಗಳಲ್ಲಿನ ಕೊಬ್ಬಿನ ಅಂಶವು ಹೃದಯಾಘಾತಕ್ಕೆ ಕಾರಣವಾಗುವ ಮೊದಲು ಆಹಾರ ಮತ್ತು ಜೀವನಶೈಲಿಯಲ್ಲಿ ಬದಲಾವಣೆ ಮಾಡುವುದು ಆರೋಗ್ಯಕ್ಕೆ ಹೆಚ್ಚು ಪ್ರಯೋಜನಕಾರಿ ಎಂದು ತಜ್ಞರು ಎಚ್ಚರಿಸಿದ್ದಾರೆ.