ನವೆಂಬರ್ 7 ರಂದು ಮಂಗಳೂರಿನ ನೆಹರೂ ಮೈದಾನದಲ್ಲಿ ಎಸ್.ವೈ.ಎಸ್.ನ “ಹುಬ್ಬುರ್ರಸೂಲ್ ಕಾನ್ಫರೆನ್ಸ್ ನ ಭಾಗವಾಗಿ ಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ “ತ್ವಯ್ಬಾ ಮೀಟ್” ಕಾರ್ಯಕ್ರಮ ಪಾಣೆಮಂಗಳೂರು ಸಾಗರ ಆಡಿಟೋರಿಯಂ ನಲ್ಲಿ ನಡೆಯಿತು.


ಜಿಲ್ಲಾ ಉಪಾಧ್ಯಕ್ಷ ಕೆ.ಎಂ.ಎಚ್.ಝುಹ್ರಿ ಕೊಂಬಾಳಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಎಸ್.ವೈ.ಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಸಭೆಯನ್ನು ಉದ್ಘಾಟಿಸಿ, ಹುಬ್ಬುರ್ರಸೂಲ್ ಕಾನ್ಫರೆನ್ಸ್ ನ ಯೋಜನೆಯನ್ನು ಮಂಡಿಸಿದರು. ರಾಜ್ಯ ಕಾರ್ಯದರ್ಶಿ ಸಿರಾಜುದ್ದೀನ್ ಸಖಾಫಿ ಕನ್ಯಾನ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಪ್ರವಾದಿ ಪ್ರೇಮಿಯಾಗಿ ಬದುಕುವುದರ ಮಹತ್ವ ಹಾಗೂ ಅನಿವಾರ್ಯತೆಯನ್ನು ಸವಿಸ್ತಾರವಾಗಿ ವಿವರಿಸಿದರು. ಜಿಲ್ಲಾ ಕೋಶಾಧಿಕಾರಿ ಮುಹಮ್ಮದ್ ಅಲಿ ತುರ್ಕಳಿಕೆ ತುರ್ಕಳಿಕೆ ಸಾಂಘಿಕ ಕಾರ್ಯಾಚರಣೆಯ ಸಾಕ್ಷಾತ್ಕಾರದತ್ತ ಬೆಳಕು ಚೆಲ್ಲಿದರು. ಕರೀಂ ಕದ್ಕಾರ್ ಬ್ಲಡ್ ಸೈಬೋದ ಕಾರ್ಯಾಚರಣೆಯ ಕುರಿತು ಮಾತನಾಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ, ಕ್ಯಾಂಪಸ್ ಕಾರ್ಯದರ್ಶಿ ಶರೀಫ್ ಬೆರ್ಕಳ,
ಜಿಲ್ಲಾ ಉಪಾಧ್ಯಕ್ಷ ತೌಸೀಫ್ ಸಅದಿ ಹರೇಕಳ, ಕಾರ್ಯದರ್ಶಿಗಳಾದ ಜಮಾಲ್ ಸಖಾಫಿ ಮುದುಂಗಾರ್, ರಶೀದ್ ಹಾಜಿ ವಗ್ಗ, ರಫೀಕ್ ಸುರತ್ಕಲ್, ಜಿಲ್ಲಾ ನಾಯಕರಾದ ನವಾಝ್ ಸಖಾಫಿ ಅಡ್ಯಾರ್‌ಪದವು, ಇಬ್ರಾಹಿಂ ಅಮ್ಜದಿ ಮಂಡೆಕೋಲು, ಮುನೀರ್ ಸಖಾಫಿ, ದಾವೂದುಲ್ ಹಕೀಂ ಕಳಂಜಿಬೈಲ್, ಮುಸ್ತಫ ಉರುವಾಲುಪದವು, ಈಸ್ಟ್ ಝೋನ್ ನಾಯಕರಾದ ಅಯ್ಯೂಬ್ ಮಹ್‌ಳರಿ ಕಾವಳಕಟ್ಟೆ, ಶಫೀಕ್ ಮಾಸ್ಟರ್ ತಿಂಗಳಾಡಿ ಮುಂತಾದವರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರೀಫ್ ನಂದಾವರ ಸ್ವಾಗತಿಸಿ, ರಶೀದ್ ಹಾಜಿ ವಗ್ಗ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ
ಸುಳ್ಯ – ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಬಿರುದುದಾನ ಮಹಾ ಸಮ್ಮೇಳನಕ್ಕೆ ಪ್ರೌಢ ಸಮಾಪ್ತಿ
ಉಳ್ತೂರು : ದರ್ಸ್ ವಾರ್ಷಿಕ ಮತ್ತು ಅನುಸ್ಮರಣೆ
ಸುಳ್ಯ ಎಲಿಮಲೆಯಲ್ಲಿ ಇಕ್ರಾಮುಸ್ಸುನ್ನ ಸನದುದಾನ ಮಹಾ ಸಮ್ಮೇಳನ ಹಾಗೂ ನುಸ್ರತ್ 42ನೇ ವಾರ್ಷಿಕ ಸಮಾರಂಭ
SSF ಬೆಂಗಳೂರು ಜಿಲ್ಲಾ ವಾರ್ಷಿಕ ಮಹಾಸಭೆ ಸಮಾಪ್ತಿ