ರಿಯಾದ್,ಅ.17: ಸೌದಿ ಅರೇಬಿಯಾದಲ್ಲಿ ಬುಧವಾರ ಸಂಜೆ ಬಸ್ಸೊಂದು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವತ್ತೈದು ಯಾತ್ರಾರ್ಥಿಗಳು ಮೃತ ಪಟ್ಟಿದ್ದಾರೆ ಎಂದು ಪೊಲೀಸ್ ವಕ್ತಾರರನ್ನು ಉಲ್ಲೇಖಿಸಿ ಸೌದಿ ಪತ್ರಿಕಾ ಸಂಸ್ಥೆ ವರದಿ ಮಾಡಿದೆ.
ಬುಧವಾರ ಸಂಜೆ 7 ಗಂಟೆ ಸುಮಾರಿಗೆ ಮದೀನಾದಿಂದ 170 ಕಿ.ಮೀ ದೂರದಲ್ಲಿರುವ ಅಲ್-ಅಖಾಲ್ ಗ್ರಾಮದ ಸಮೀಪ ಹಿಜ್ರಾ ರಸ್ತೆಯಲ್ಲಿ 39 ಪ್ರಯಾಣಿಕರನ್ನು ಹೊತ್ತ ಖಾಸಗಿ ಚಾರ್ಟರ್ಡ್ ಬಸ್ ಭಾರೀ ಘಾತ್ರದ ಲೋಡರ್ಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಅಲ್-ಹಮ್ನಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ನಲ್ಲಿದ್ದವರು ಸೌದಿಯಲ್ಲಿನ ವಲಸಿಗರಾದ ಅರಬ್ ಮತ್ತು ಏಷ್ಯಾ ವಂಶಜರು ಎನ್ನಲಾಗಿದೆ.
ಘಟನೆಯಲ್ಲಿ 36 ಜನರು ನಿಧನ ಹೊಂದಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿಗಳು ಮಾಡಿದ್ದವು. ಸೌದಿ ರೆಡ್ ಕ್ರೆಸೆಂಟ್ ಅಥಾರಿಟಿ ಮತ್ತು ಇತರ ತುರ್ತು ಸೇವೆಗಳು ಸ್ಥಳಕ್ಕಾಗಮಿಸಿ ಘಟನೆಯನ್ನು ನಿಯಂತ್ರಿಸಿದೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ