ಜಿಂದ್: ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಂಡು ವಿದ್ಯುನ್ಮಾನ ಮತ ಯಂತ್ರ(ಇವಿಎಂ) ಅನ್ನು ಹ್ಯಾಕ್ ಮಾಡುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿರುವ ಸಂದರ್ಭದಲ್ಲೇ, ಹರಿಯಾಣ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಹಾಲಿ ಶಾಸಕರೊಬ್ಬರು, ಇವಿಎಂನಲ್ಲಿ ನೀವು ಯಾವುದೇ ಬಟನ್ ಒತ್ತಿದರೂ ಅದು ಬಿಜೆಪಿಗೆ ಚಲಾವಣೆಯಾಗುತ್ತದೆ ಎಂದು ಹೇಳಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇಲ್ಲಿನ ಕರ್ನಾಲ್ ಜಿಲ್ಲೆಯ ಅಸಂದ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಕ್ಷಿಷ್ ಶಿಂಗ್ ವಿರ್ಕ್ ಅವರು, ‘ಇಂದು ನೀವು ತಪ್ಪು ಮಾಡಿದರೆ ಐದು ವರ್ಷಗಳ ಕಾಲ ನರಳಾಡುತ್ತೀರಿ. ನಮಗೆ ಯಾರು ಯಾರಿಗೆ ಮತ ಚಲಾಯಿಸಿದ್ದಾರೆ ಎಂದು ತಿಳಿಯುತ್ತದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಅವರು ಜನರ ಬಗ್ಗೆ ತುಂಬಾ ಎಚ್ಚರಿಕೆ ವಹಿಸಿದ್ದಾರೆ ಎಂದಿದ್ದಾರೆ. ಅಲ್ಲದೆ ನೀವು ಯಾವುದೇ ಬಟನ್ ಒತ್ತಿದರು ನಿಮ್ಮ ಮತ ಬಿಜೆಪಿಗೆ ಮಾತ್ರ ಚಲಾವಣೆಯಾಗುತ್ತದೆ. ನಾವು ವಿದ್ಯುನ್ಮಾನ ಯಂತ್ರಗಳನ್ನು ಹಾಗೆ ಸಿದ್ಧಪಡಿಸಿದ್ದೇವೆ’ ಎಂಬ ಹೇಳಿಕೆ ನೀಡಿದ್ದಾರೆ
ಹರಿಯಾಣ ವಿಧಾನಸಭೆಗೆ ನಾಳೆ ಮತದಾನ ನಡೆಯಲಿದ್ದು, ಮತದಾನಕ್ಕೂ ಮನ್ನಾದಿನ ಬಿಜೆಪಿ ಶಾಸಕ ನೀಡಿರುವ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ