janadhvani

Kannada Online News Paper

NRC ಜಾರಿಗೊಳಿಸುವುದನ್ನು ಕೈಬಿಟ್ಟ ಕರ್ನಾಟಕ ಸರ್ಕಾರ

ಬೆಂಗಳೂರು.ಅ,21: ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಜಾರಿಯ ನಿರ್ಧಾರವನ್ನು ಕರ್ನಾಟಕ ಸರ್ಕಾರ ಕೈ ಬಿಟ್ಟಿದೆ ಎಂದು ದಿ ಟೈಮ್ಸ್ ಆಫ್ ಇಂಡಿಯಾ ಅಂತರ್ಜಾಲ ಪತ್ರಿಕೆ ವರದಿ ಮಾಡಿದೆ.

ರಾಜ್ಯದಲ್ಲಿ ಎನ್ ಆರ್ ಸಿಯನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದರು. ಆದರೆ ಇದೀಗ ವರದಿಯಾಗಿರುವಂತೆ ಗೃಹಸಚಿವರು ಎನ್ ಆರ್ ಸಿ ಜಾರಿ ಕುರಿತು ಮಾತನಾಡಿದ್ದ ಮರುದಿನವೇ ಎನ್ ಆರ್ ಸಿ ಜಾರಿಯನ್ನು ಸರ್ಕಾರ ಕೈಬಿಟ್ಟಿದೆ ಎಂದು ಹೇಳಲಾಗಿದೆ.

ಅಸ್ಸಾಂನಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವಂತೆ ರಾಜ್ಯದಲ್ಲಿ ಪ್ರಾಯೋಗಿಕ ಸಮಸ್ಯೆ(Database) ಯಿಂದಾಗಿ ಎನ್ ಆರ್ ಸಿ ಜಾರಿ ಮಾಡುವುದಿಲ್ಲ. ಆದರೆ, ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಇಲ್ಲಿ ನೆಲೆಸಿರುವವರ ಬಗ್ಗೆ ನಾವು ಮಾಹಿತಿ ಪಡೆಯುತ್ತೇವೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿರುವುದಾಗಿ ವರದಿಯಾಗಿದೆ.