janadhvani

Kannada Online News Paper

ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ?

ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ನಡೆದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡುವುದು ಖಚಿತ ಎಂದು ಮಾಜಿ ಸ್ಪೀಕರ್ ಕೆ ಬಿ ಕೋಳಿವಾಡ ಹೇಳಿದ್ದಾರೆ.

ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ‌10 ಸ್ಥಾನ ಗೆಲ್ಲಲಿದೆ. ಜೆಡಿಎಸ್ ಮೂರು ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಆದರೆ ಈ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವುದಿಲ್ಲ. ಅಲ್ಲದೆ ಈ‌ ಅನರ್ಹರ ಬಗ್ಗೆ ಈಗಾಗಲೇ ಕ್ಷೇತ್ರದಲ್ಲೂ ವಿರೋಧ ವ್ಯಕ್ತವಾಗಿದೆ. ಅನರ್ಹರ ವಿರುದ್ಧ ಜನರಿಂದ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಈ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚು ಗೆಲ್ಲುವುದಿಲ್ಲ ಎಂದರು.

ಮತ್ತೆ ಮುಂದುವರಿಸಿದ ಮಾಜಿ ಸ್ಪೀಕರ್, ಯಡಿಯೂರಪ್ಪ ಸರ್ಕಾರಕ್ಕೆ ಬಹುಮತ ಬರುವುದಿಲ್ಲ. ಮುಂದೆ ಯಡಿಯೂರಪ್ಪ ರಾಜೀನಾಮೆ ಕೊಡುವ ಸಂದರ್ಭ ಬರಬಹುದು. ನಂತರ ಮಾರ್ಚ್ 2020ಕ್ಕೆ ಸಾರ್ವತ್ರಿಕ ಚುನಾವಣೆ ಬಂದರೂ ಆಶ್ಚರ್ಯವಿಲ್ಲ ಎಂದು ಸಾರ್ವತ್ರಿಕ ಚುನಾವಣೆ ಬರುವ ಬಗ್ಗೆ ಭವಿಷ್ಯ ನುಡಿದರು.