ಶಾರ್ಜಾ: ನರೇಂದ್ರ ಮೋದಿ ಸರಕಾರದ ಮುಸ್ಲಿಂ ವಿರೋಧಿ ಧೋರಣೆಯನ್ನು ನೊಬೆಲ್ ಪ್ರಶಸ್ತಿ ವಿಜೇತ ಓರ್ಹಾನ್ ಪಮುಖ್ ಟೀಕಿಸಿದ್ದು, ಅಲ್ಪಸಂಖ್ಯಾತ ವಿರೋಧಿ ಧೋರಣೆಯನ್ನು ಸರಕಾರವು ಸರಿಪಡಿಸಬೇಕು ಎಂದು ಪಮುಖ್ ಬಯಸಿದ್ದಾರೆ. ಅವರು ಶಾರ್ಜಾ ಅಂತರ್‌ರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
ಜನಾಂಗೀಯತೆಯ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ನೆಪದಲ್ಲಿ ಮುಸ್ಲಿಮರು ಸೇರಿದಂತೆ ಅಲ್ಪಸಂಖ್ಯಾತರ ವಿರುದ್ಧದ ನಿಲುವು ಸ್ವೀಕಾರಾರ್ಹವಲ್ಲ ಎಂದು ಓರ್ಹಾನ್ ಪಮುಖ್ ತಿಳಿಸಿದರು.
ಪ್ರಪಂಚದಾದ್ಯಂತ ಅಲ್ಪಸಂಖ್ಯಾತರು, ಜನಾಂಗೀಯ ಗುಂಪುಗಳು ಮತ್ತು ನಿರಾಶ್ರಿತರು ದೊಡ್ಡ ಸವಾಲನ್ನು ಎದುರಿಸುತ್ತಿದ್ದಾರೆ, ಇದು ಎಷ್ಟು ಕಾಲ ಮುಂದುವರಿಯುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಮಲಯಾಳಂನಲ್ಲಿ ಅವರ ಕೃತಿಗಳ ಸ್ವೀಕಾರವು ಆಶ್ಚರ್ಯಕರವಾಗಿದೆ ಎಂದು ಹೇಳಿದರು.