janadhvani

Kannada Online News Paper

ಮಹಾರಾಷ್ಟ್ರ ಬಿಕ್ಕಟ್ಟು: ಎನ್‌ಡಿಎ ಯಿಂದ ಶಿವಸೇನಾ ಔಟ್

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು ಬಿಜೆಪಿಯ ಮೈತ್ರಿ ಪಕ್ಷ ಶಿವಸೇನಾ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದಿದೆ.

ಶಿವಸೇನಾ ಸಂಸದ ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮ ಸಚಿವ ಅರವಿಂದ್‌ ಸಾವಂತ್‌ ಅವರು ಪ್ರಧಾನಿ ನರೇಂದ್ರ ಮೋದಿ ಸಂಪುಟದಿಂದ ಹೊರ ಬಂದಿರುವುದಾಗಿ ಸೋಮವಾರ ಹೇಳಿದ್ದಾರೆ.ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಶಿವಸೇನಾಗೆ ರಾಜ್ಯಪಾಲರು ಸರ್ಕಾರ ರಚನೆಗೆ ಆಹ್ವಾನಿಸಿರುವ ಬೆನ್ನಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಶಿವಸೇನಾ ಸರ್ಕಾರ ರಚನೆಗಾಗಿ ಎನ್‌ಸಿಪಿ ಹಾಗೂ ಕಾಂಗ್ರೆಸ್‌ ಬೆಂಬಲ ಕೋರುವ ಸಾಧ್ಯತೆಗಳಿವೆ.

ಜನಧ್ವನಿಗೆ ವಾಟ್ಸಾಪ್ ಮಾಡಿ whatsapp
error: Content is protected !!