ನವದೆಹಲಿ: ತೀವ್ರ ದಿವಾಳಿತನಕ್ಕೆ ಗುರಿಯಾಗಿರುವ ರಿಲಯನ್ಸ್ ಕಮ್ಯುನಿಕೇಷನ್ಸ್ ಕಂಪನಿಯ ಅಧ್ಯಕ್ಷ ಸ್ಥಾನಕ್ಕೆ ಅನಿಲ್ ಧೀರೂಬಾಯಿ ಅಂಬಾನಿ ಅವರು ರಾಜೀನಾಮೆ ನೀಡಿದ್ದಾರೆ.
ಅನಿಲ್ ಅಂಬಾನಿ ಜೊತೆಗೆ, ಛಾಯಾ ವಿರಾನಿ, ರ್ಯಾನಾ ಕರಾನಿ, ಮಂಜರಿ ಕಾಕೆರ್ ಮತ್ತು ಸುರೇಶ್ ರಂಗಾಚಾರ್ ಅವರು ಸಹ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ ಎಂದು ರಿಲಯನ್ಸ್ ಕಮ್ಯುನಿಕೇಷನ್ಸ್ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಅಂಬಾನಿ, ಛಾಯಾ ವಿರಾನಿ, ಮಂಜರಿ ಕೇಕರ್ ಅವರು ನವೆಂಬರ್ 15ರಂದು, ರ್ಯಾನಾ ಕರಾನಿ ಅವರು ನವೆಂಬರ್ 14ರಂದು ಮತ್ತು ಸುರೇಶ್ ರಂಗಾಚಾರ್ ಅವರು ನವೆಂಬರ್ 13ರಂದು ರಾಜೀನಾಮೆ ನೀಡಿದ್ದಾರೆ. ಕಳೆದ ಅಕ್ಟೋಬರ್ 4ರಂದು ಮಣಿಕಂಠನ್ ವಿ. ಅವರು ಕಂಪನಿಯ ನಿರ್ದೇಶಕ ಹಾಗೂ ಮುಖ್ಯ ಹಣಕಾಸು ಅಧಿಕಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಈಗಾಗಲೇ ಮುಖ್ಯ ಹಣಕಾಸು ಅಧಿಕಾರಿ ಮಣಿಕಂಠನ್ ಸ್ಥಾನಕ್ಕೆ ಡಿ. ವಿಶ್ವನಾಥ್ ಎಂಬುವರು ಆಯ್ಕೆಯಾಗಿದ್ದಾರೆ. ಇನ್ನೂ ಸಾಲಗಾರರ ಸಮಿತಿ ಅನುಮೋದನೆ ದೊರೆಯಬೇಕಿದೆ ಎಂದು ತಿಳಿದು ಬಂದಿದೆ.
2019-20ರ ಜುಲೈ-ಸೆಪ್ಟೆಂಬರ್(ಎರಡನೇ ತ್ರೈಮಾಸಿಕ ಅವಧಿ) ಅವಧಿಯಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಕಂಪನಿ 30,142 ಕೋಟಿ ರೂಪಾಯಿ ನಷ್ಟ ಅನುಭವಿಸಿದೆ. ಮೊದಲ ತ್ರೈಮಾಸಿಕ ಅವಧಿಯಲ್ಲಿ ಕಂಪನಿ 366 ಕೋಟಿ ರೂ. ನಷ್ಟ ಅನುಭವಿಸಿತ್ತು.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ