ಪ್ರೀತಿಯ ಪ್ರವಾದಿ ಶಾಂತಿಯ ಹಾದಿ,ಸಮಾನತೆಯ ಸಂದೇಶ ವಾಹಕ ಲೋಕಾನುಗ್ರಹಿ ಹಝ್ರತ್ ಪೈಗಂಬರ್ ಮುಹಮ್ಮದ್ (ಸ.ಅ) ರವರ 1494 ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿಯ ವತಿಯಿಂದ ನವೆಂಬರ್ 22 ಶುಕ್ರವಾರ ಸಂಜೆ 7 ಗಂಟೆಗೆ ಅಲ್ ಮಾಸಾ ಹಾಲ್ ಮಸ್ಕತ್ ನ ರುವಿಯಲ್ಲಿ “ಹಬೀಬ್ (ಸ.ಅ.) ನಮ್ಮ ಜತೆಗಿರಲಿ” ಎಂಬ ಘೋಷ ವಾಕ್ಯ ದೊಂದಿಗೆ ಕರ್ನಾಟಕ ಕಲ್ಚರಲ್ ಫೌಂಡೇಶನ್ ಒಮಾನ್ ಇದರ ವತಿಯಿಂದ ಬೃಹತ್ ಮೀಲಾದ್ ಕಾನ್ಫರೆನ್ಸ್- 2019 ನೆಡೆಯಲಿದೆ.
ಕೆಸಿಎಫ್ ಒಮಾನ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಅಯ್ಯೂಬ್ ಕೋಡಿ ಇವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದ ಉದ್ಘಾಟನೆ ಯನ್ನು ಮೌಲಾನ ಇಬ್ರಾಹಿಂ ಸಖಾಫಿ ಅಧ್ಯಕ್ಷರು ಎಸ್ ವೈಸ್ ದಾವಣಗೆರೆ ಇವರು ನೆರವೇರಿಸಲಿದ್ದಾರೆ.ಎಸ್ಎಸ್ಎಫ್ ಕರ್ನಾಟಕ ರಾಜ್ಯ ಉಪಾಧ್ಯಕ್ಷ ರಾದ ಹಾಫಿಝ್ ಎಚ್. ಐ. ಸುಫಿಯಾನ್ ಸಖಾಫಿ ಕಾವಲ್ ಕಟ್ಟೆ ಇವರು ಮುಖ್ಯ ಪ್ರಭಾಷಣಗೈಯಲಿದ್ದಾರೆ.
ಹಾಗೂ ಖಾರಿ ಮುಹಮ್ಮದ್ ರಿಯಾಝುದ್ದೀನ್ ಅಶ್ರಫಿ ಮುಂಬಯಿ ಇವರಿಂದ ನ’ಅತೇ ಶರೀಫ್ ಮತ್ತು ಕೆಸಿಎಫ್ ಒಮಾನ್ ಕಾರ್ಯಕರ್ತರಿಂದ ಬುರ್ದ ಮಜ್ಲಿಸ್ ನಡೆಯಲಿದೆ ಎಂದು ಕೆಸಿಎಫ್ ಒಮಾನ್ ರಾಷ್ಟ್ರೀಯ ಮೀಲಾದ್ ಸ್ವಾಗತ ಸಮಿತಿಯ ಚೆಯರ್ಮೆನ್ ಇಬ್ರಾಹಿಂ ಹಾಜಿ ಅತ್ರಾಡಿ ಹಾಗೂ ಕನ್ವೀನರ್ ಸಯ್ಯಿದ್ ಆಬಿದ್ ಅಲ್ ಹೈದ್ರೋಸಿ ಇವರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ
ಗೂಡಿನಬಳಿ ಸುನ್ನೀ ಸೆಂಟರ್ ವತಿಯಿಂದ ಸ್ವಾತಂತ್ರ್ಯೋತ್ಸವ
ಕೆ.ಸಿ.ಎಫ್. ಸೌದಿ ರಾಷ್ಟ್ರೀಯ ಸಮಿತಿಯಿಂದ ಆನ್ಲೈನ್ ಸಂವಾದ ಕಾರ್ಯಕ್ರಮಈ