ಮೈಸೂರು: ತನ್ವೀರ್ ಸೇಠ್ ಮೇಲೆ ಈಚೆಗೆ ನಡೆದ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿರುವ ಆರೋಪಿಗಳ ಕುಟುಂಬಸ್ಥರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ್ದಾರೆ.
ಬಂಧಿತ 6 ಮಂದಿ ಆರೋಪಿಗಳ ಪೈಕಿ ಒಬ್ಬನಾದ ಸೈಯ್ಯದ್ ಮೊಹೀಬ್ ಅವರ ಪತ್ನಿ ಹೀನಾ ಕೌಸರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನನ್ನ ಪತಿ ಮುಗ್ಧ. ಅವರಿಗೂ ಪ್ರಕರಣಕ್ಕೂ ಸಂಬಂಧ ಇಲ್ಲ. ಒಂದು ವೇಳೆ ನ್ಯಾಯ ಸಿಗದೇ ಹೋದರೆ ಕಮೀಷನರ್ ಅವರ ಕಚೇರಿಯಲ್ಲಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿದರು.
ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಮಾತನಾಡಿ, ಪೊಲೀಸರು ಬಿಜೆಪಿ ಮತ್ತು ಕಾಂಗ್ರೆಸ್ ಒತ್ತಡಕ್ಕೆ ಮಣಿದು ಎಸ್‌ಡಿಪಿಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಸೈಯದ್ ಮೊಹೀಬ್, ಮುಜಾಮಿರ್ ಪಕ್ಷದ ಕಾರ್ಯಕರ್ತರಾಗಿದ್ದಾರೆ. ಇವರೊಂದಿಗೆ ಬಂಧಿಸಿರುವ ಇನ್ನಿತರ ಆರೋಪಿಗಳು ಮುಗ್ಧರು ಎಂದು ಪಕ್ಷದ ಆಂತರಿಕ ಶಿಸ್ತು ಸಮಿತಿಯ ವರದಿ ಹೇಳಿದೆ. ಹೀಗಾಗಿ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.
ಈಚೆಗೆ ಆರೋಪಿಗಳನ್ನು ಪಕ್ಷದ ಕಚೇರಿಗೆ ಕರೆದುಕೊಂಡು ಬಂದು ಫೋಟೊ ತೆಗೆದಿದ್ದಾರೆ. ಇದು ಯಾವ ರೀತಿಯ ವಿಚಾರಣೆ ಎಂಬುದು ಗೊತ್ತಾಗುತ್ತಿಲ್ಲ. ಎಸ್‌ಡಿಪಿಐನ್ನು ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸುವ ಉದ್ದೇಶದಿಂದಲೇ ಪೊಲೀಸರು ಈ ರೀತಿ ಮಾಡುತ್ತಿದ್ದಾರೆ. ಆರೋಪಿಗಳು ಕುರಾನ್ ಮೇಲೆ, ತಾಯಿ ತಂದೆ ಮೇಲೆ ಪ್ರಮಾಣ ಮಾಡಲು ತಯಾರಿದ್ದಾರೆ. ಅವರನ್ನು ಸುಳ್ಳು ಹೇಳಿ ಪೊಲೀಸ್ ಠಾಣೆಗೆ ಕರೆದೋಯ್ದು ದೋಷಾರೋಪ ಹೊರಿಸಲಾಗಿದೆ. ಇವೆಲ್ಲವೂ ಕಟ್ಟುಕತೆ ಎಂದು ಕಿಡಿಕಾರಿದರು.
ವಕೀಲ ಅನಸ್, ಆರೋಪಿಗಳ ಪರ ವಕಾಲತ್ತು ವಹಿಸಿ ಜಾಮೀನಿಗೆ ಯತ್ನಿಸಲಾಗುವುದು ಎಂದು ತಿಳಿಸಿದರು















ಇನ್ನಷ್ಟು ಸುದ್ದಿಗಳು
ರಾಜ್ಯ ಸರ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ವಖ್ಫ್ ಸಲಹಾ ಸಮಿತಿಯಿಂದ ಅಭಿನಂದನೆಗಳು
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
‘ಎನ್ ಹಾನ್ಸ್ ಇಂಡಿಯಾ ಕಾನ್ಫರೆನ್ಸ್’- ಮಂಗಳೂರಿನ ಸಮಾವೇಶಕ್ಕೆ ಕ್ಷಣಗಣನೆ
ಖುರ್ಆನ್ ದುರ್ವ್ಯಾಖ್ಯಾನಕಾರರಿಂದ ಇಸ್ಲಾಂಗೆ ಭಾರೀ ಹಾನಿಯುಂಟಾಗುತ್ತಿದೆ- ಡಾ. ಝೈನೀ ಕಾಮಿಲ್
ಪಬ್ಲಿಕ್ ಟಿವಿಯ ರಂಗನಾಥ್ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ
‘ಕೈ’ ಪಾಲಯಕ್ಕೆ ಸಿಎಂ ಇಬ್ರಾಹಿಂ ಗುಡ್ ಬೈ – ಜೆಡಿಎಸ್ ಸೇರುವುದು ಖಚಿತ.?
ಮದ್ರಸಾಗಳಲ್ಲಿ, ಜನಗಳ ಮಧ್ಯೆ ಸೌಹಾರ್ದ, ಸಹಬಾಳ್ವೆ, ಭ್ರಾತೃತ್ವ ಸಂಬಂಧಗಳನ್ನು ಬೆಳೆಸಲು ಕಲಿಸಲಾಗುತ್ತಿದೆ- ರಾಜ್ಯ ಸರ್ಕಾರ
ರೌಳತುಲ್ ಉಲೂಂ ಓಲ್ಡ್ ಸ್ಟೂಡೆಂಟ್ಸ್ ಉಕ್ಕುಡ ಆಯೋಜಿಸಿದ ಸ್ನೇಹ ಸಂಗಮ
ರಾಜ್ಯದಲ್ಲಿ ನೈಟ್ ಕರ್ಪ್ಯೂ- ರಾತ್ರಿ 10 ರಿಂದ ಯಾವುದೇ ವಾಹನಗಳ ಓಡಾಟಕ್ಕೆ ಅವಕಾಶವಿಲ್ಲ