janadhvani

Kannada Online News Paper

ಹೈದರಾಬಾದ್: ಪಶುವೈದ್ಯೆ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳೂ ಎನ್’ಕೌಂಟರ್’ನಲ್ಲಿ ಹತರಾಗಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಪಶುವೈದ್ಯೆ ಪ್ರಿಯಾಂಕಾ ರೆಡ್ಡಿಯವರ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದ ಆರೋಪಿಗಳು, ನಂತರ ಸೀಮೆಎಣ್ಣೆ ಹಾಕಿ ಸುಟ್ಟುಹಾಕಿದ್ದರು. ಪ್ರಕರಣದ ದೇಶದಾದ್ಯಂತ ಭಾರೀ ಚರ್ಚೆ ಹಾಗೂ ವಿರೋಧಕ್ಕೆ ಕಾರಣವಾಗಿತ್ತು. ಎಲ್ಲಾ ನಾಲ್ವರು ಆರೋಪಿಗಳಾದ ಶಿವು, ಆರಿಫ್ ಚೆನ್ನಕೇಶವುಲು, ನವೀನ್ ಎಂಬುವವರನ್ನು ಪೊಲೀಸರು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆಂದು ವರದಿಗಳು ತಿಳಿಸಿವೆ.

ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ತನಿಖೆ ಹಿನ್ನೆಲೆಯಲ್ಲಿ ಅತ್ಯಾಚಾರ ನಡೆದ ಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಇದರಂದೆ. ಚಟಾನ್ ಪಲ್ಲಿ ಬ್ರಿಡ್ಜ್ ಬಳಿ ಇಂದು ಬೆಳಗಿನ ಜಾವ 3.30ರ ಸುಮಾರಿಗೆ ಆತ್ಮರಕ್ಷಣೆಗಾಗಿ ಪೊಲೀಸರು ಎಲ್ಲಾ ಆರೋಪಿಗಳನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

error: Content is protected !!
%d bloggers like this: