janadhvani

Kannada Online News Paper

ನವದೆಹಲಿ, ಡಿ 8:- ಭಾನುವಾರ ಬೆಳ್ಳಂಬೆಳಗ್ಗೆ ದೆಹಲಿಯ ರಾಣಿ ಜಾನ್ಸಿ ರಸ್ತೆಯಲ್ಲಿರುವ ಅನಾಜ್‌ ಮಂಡಿ ಪ್ರದೇಶದ ಮೂರು ಮಹಡಿ ಕಟ್ಟಡದ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿದ್ದು, 43 ಮಂದಿ ಮೃತಪಟ್ಟಿದ್ದಾರೆ.

ಘಟನೆ ಕುರಿತು ಟ್ವೀಟ್‌ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ದೆಹಲಿಯ ಅನಾಜ್‌ ಮಂಡಿ ಪ್ರದೇಶದಲ್ಲಿ ನಡೆದಿರುವ ಅಗ್ನಿ ದುರಂತ ಭಯಾನಕವಾಗಿದೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ಘಟನಾ ಸ್ಥಳದಲ್ಲಿ ಅಧಿಕಾರಿಗಳು ಅಗತ್ಯವಿರುವ ಎಲ್ಲ ಸಹಾಯ ಮಾಡುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಅನಾಜ್ ಮಂಡಿಯಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಹತ್ತಿರದ ರಕ್ತ ಸಂಬಂಧಿಗಳಿಗೆ ಪ್ರಧಾನಿ ನರೇಂದ್ರಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಪರಿಹಾರ ಪ್ರಕಟಿಸಿದ್ದಾರೆ.ದುರಂತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ರೂ.ಪರಿಹಾರಕ್ಕೂ ಪ್ರಧಾನಿ ಅನುಮೋದಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!
%d bloggers like this: