ವಾಷಿಂಗ್ಟನ್: ಪೌರತ್ವ (ತಿದ್ದುಪಡಿ) ಮಸೂದೆ ರಾಜ್ಯಸಭೆಯಲ್ಲಿಯೂ ಅಂಗೀಕಾರವಾದರೆ ಗೃಹ ಸಚಿವ ಬೇಕು ಎಂದು ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಅಮೆರಿಕದ ಆಯೋಗ ಅಲ್ಲಿನ ಸರ್ಕಾರಕ್ಕೆ ಮನವಿ ಮಾಡಿದೆ.
ಮಸೂದೆಗೆ ಲೋಕಸಭೆಯಲ್ಲಿ ಅನುಮೋದನೆ ದೊರೆತಿರುವುದು ಕಳವಳ ಮೂಡಿಸಿದೆ. ಇದು ‘ತಪ್ಪು ದಿಕ್ಕಿನಲ್ಲಿ ಅಪಾಯಕಾರಿ ತಿರುವು’ ಎಂದು ಆಯೋಗ ಬಣ್ಣಿಸಿದೆ. ಮಸೂದೆಯು ಭಾರತದ ಸಂವಿಧಾನಕ್ಕೆ, ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂಬ ತತ್ವಕ್ಕೆ ಹಾಗೂ ಭಾರತದ ಭವ್ಯ ಇತಿಹಾಸಕ್ಕೆ ವಿರುದ್ಧವಾಗಿದೆ ಎಂದು ಹೇಳಿದೆ.
ಬಾಂಗ್ಲಾದೇಶ, ಅಫ್ಗಾನಿಸ್ಥಾನ ಹಾಗೂ ಪಾಕಿಸ್ತಾನದ ಮುಸ್ಲಿಮೇತರ ವಲಸಿಗರಿಗೆ ಭಾರತೀಯ ಪೌರತ್ವ ನೀಡುವ ಮಸೂದೆಗೆ ಲೋಕಸಭೆಯಲ್ಲಿ ಸೋಮವಾರ ಅನುಮೋದನೆ ದೊರೆತಿತ್ತು. ರಾಜ್ಯಸಭೆಯಲ್ಲಿ ಇನ್ನು ಮಂಡನೆಯಾಗಬೇಕಿದೆ. ಮಸೂದೆಗೆ ಪ್ರತಿಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಆದರೆ, ಅಮಿತ್ ಶಾ ಅವರು ಮಸೂದೆಯನ್ನು ಸಮರ್ಥಿಸಿಕೊಂಡಿದ್ದಾರೆ. ‘ಈ ಮಸೂದೆಯು ಸಂವಿಧಾನದ 14ನೇ ವಿಧಿಯನ್ನು ಉಲ್ಲಂಘಿಸುವುದಿಲ್ಲ ಮತ್ತು ಅಸಂವಿಧಾನಾತ್ಮಕವೂ ಅಲ್ಲ. ಅಲ್ಲದೆ ಭಾರತದಲ್ಲಿರುವ ಮುಸ್ಲಿಮರಿಗೆ ಯಾವುದೇ ತೊಂದರೆ ಆಗುವುದಿಲ್ಲ. ಆದರೆ ಮ್ಯಾನ್ಮಾರ್‌ನಿಂದ ಬರುವ ರೋಹಿಂಗ್ಯಾ ಮುಸ್ಲಿಮರಿಗೆ ಭಾರತದ ಪೌರತ್ವವನ್ನು ನೀಡುವುದಿಲ್ಲ’ ಎಂದು ಈ ಹಿಂದೆಯೇ ಸ್ಪಷ್ಟಪಡಿಸಿದ್ದಾರೆ.
ಪ್ರಸ್ತುತ ಲೋಕಸಭೆಯಲ್ಲಿ ಮಂಡನೆಗೊಂಡಿರುವ ಮಸೂದೆ ಅನ್ವಯ ಡಿ.31, 2014ರ ವರೆಗೂ ಧಾರ್ಮಿಕ ದಬ್ಬಾಳಿಕೆಗೆ ಒಳಗಾಗಿ ಬಾಂಗ್ಲಾದೇಶ, ಪಾಕಿಸ್ತಾನ, ಆಫ್ಘಾನಿಸ್ತಾನದಿಂದ ಓಡಿ ಬಂದಿರುವ ಹಿಂದೂ, ಸಿಖ್, ಬುದ್ಧ, ಜೈನ್, ಪಾರ್ಸಿ ಹಾಗೂ ಕ್ರೈಸ್ತ ಸಮುದಾಯಗಳ ಸದಸ್ಯರುಗಳನ್ನು ಅಕ್ರಮ ವಲಸಿಗರೆಂದು ಪರಿಗಣಿಸಲಾಗುವುದಿಲ್ಲ. ಆದರೆ, ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುತ್ತದೆ.
ಸಂಸತ್ತಿನಲ್ಲಿ ಮಂಡಿಸಲಾಗಿರುವ ಮಸೂದೆ ಅತ್ಯಂತ ಸಮಸ್ಯೆಯಿಂದ ಕೂಡಿದ್ದು, ಪೌರತ್ವ ತಿದ್ದುಪಡಿ ಮಸೂದೆಯು ಧಾರ್ಮಿಕ ತಾರತಮ್ಯವನ್ನು ಕಾನೂನು ಬದ್ಧಗೊಳಿಸಲಿದೆಯೇ? ಎಂದು ನಿಯೋಗ ಪ್ರಶ್ನಿಸಿದೆ.
ಒಂದು ವೇಳೆ ಉಭಯ ಸದನಗಳಲ್ಲಿ ಮಸೂದೆ ಅಂಗೀಕಾರಗೊಂಡಿದ್ದೇ ಆದರೆ, ಅಮೆರಿಕಾ ಸರ್ಕಾರ ಗೃಹ ಸಚಿವ ಅಮಿತ್ ಶಾ ಹಾಗೂ ಇತರೆ ಪ್ರಮುಖ ನಾಯಕರ ಮೇಲೆ ನಿರ್ಬಂಧ ಹೇರಬೇಕು ಎಂದು ಆಗ್ರಹಿಸಿದೆ.
ವಿವಾದಿತ ರಾಷ್ಟ್ರೀಯ ಪೌರತ್ವ (ತಿದ್ದುಪಡಿ) ಮಸೂದೆಗೆ ಲೋಕಸಬೆ ಅಸ್ತು ಎಂದು ಹೇಳಿದೆ. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನಗಳಲ್ಲಿನ ಧಾರ್ಮಿಕ ಉಪದ್ರವಗಳಿಂದ ಬೇಸತ್ತು, ಅಲ್ಲಿಂದ ಭಾರತಕ್ಕೆ ಬಂದಿರುವ ಹಿಂದು, ಸಿಖ್, ಬೌದ್ಧ, ಜೈನ, ಪಾರ್ಸಿ ಹಾಗೂ ಕ್ರೈಸ್ತರಿಗೆ ಭಾರತೀಯ ಪೌರತ್ವ ಉದ್ದೇಶವು ಮಸೂದೆಗೆ ಇದೆ. ಇನ್ನು ವಿಧೇಯಕವು ರಾಜ್ಯಸಭೆಯಲ್ಲಿ ಮಂಡನೆಯಾಗಿ ಅಲ್ಲೂ ಅನುಮೋದನೆ ಪಡೆದುಕೊಂಡಿದ್ದೇ ಆದರೆ, ಇವರಿಗೆಲ್ಲಾ ಬಾರತೀಯ ಪೌರತ್ವ ಲಭಿಸಲಿದೆ.