ರಿಯಾದ್, ಡಿ.11: ಸೌದಿಯಲ್ಲಿ ತಾತ್ಕಾಲಿಕವಾಗಿ ಸ್ಥಿಗಿತಗೊಳಿಸಲಾದ ಮಕ್ಕಾ-ಮದೀನಾ ಸಂಚರಿಸುವ ಅಲ್-ಹರಮೈನ್ ರೈಲು ಸೇವೆಯು ಇಂದಿನಿಂದ ಪುನರಾರಂಭಗೊಳ್ಳಲಿದೆ.
ಜಿದ್ದಾ ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ ರೈಲು ಓಡಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿತ್ತು. ಜಿದ್ದಾ ವಿಮಾನ ನಿಲ್ದಾಣದ ಬಳಿ ಹೊಸದಾಗಿ ತೆರೆಯಲಾದ ರೈಲ್ವೆ ನಿಲ್ದಾಣದ ಮೂಲಕ ಸೇವೆಯನ್ನು ಪುನರಾರಂಭಿಸಲಾಗುತ್ತಿದೆ.
ಎರಡು ತಿಂಗಳ ಹಿಂದೆ ಜಿದ್ದಾದ ಮುಖ್ಯ ರೈಲು ನಿಲ್ದಾಣವಾದ ಸುಲೈಮಾನಿಯಾ ರೈಲು ನಿಲ್ದಾಣವು ಬೆಂಕಿಗಾಹುತಿಯಾಗಿದ್ದು, ಇದರ ಬೆನ್ನಲ್ಲೇ ಮಕ್ಕಾ-ಮದೀನಾ ಅಲ್-ಹರಮೈನ್ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಬೆಂಕಿಯಿಂದ ಹಾನಿಗೊಳಗಾದ ನಿಲ್ದಾಣದ ಬದಲಾಗಿ ಜಿದ್ದಾ ಕಿಂಗ್ ಅಬ್ದುಲ್ ಅಝೀಝ್ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಬಳಿ ಮತ್ತೊಂದು ರೈಲ್ವೆ ನಿಲ್ದಾಣವನ್ನು ನಿರ್ಮಿಸುವ ಮೂಲಕ ಸೇವೆಯನ್ನು ಪುನರಾರಂಭಿಸಲಾಗಿದೆ.
ರೈಲು ಸೇವೆಯು ಇಂದಿನಿಂದ ಪುನರಾರಂಭಗೊಳ್ಳಲಿದೆ ಎಂದು ಅಲ್ ಹರಮೈನ್ ಎಕ್ಸ್ಪ್ರೆಸ್ ರೈಲು ಮಹಾ ನಿರ್ದೇಶಕ ರಯಾನ್ ಅಲ್ ಹರ್ಬಿ ತಿಳಿಸಿದ್ದಾರೆ















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ