ನವದೆಹಲಿ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಮಸೂದೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಕಿಡಿ ಕಾರಿದ್ದಾರೆ.
ಡಿ.11 ಬುಧವಾರ ಭಾರತ ಸಂವಿಧಾನದ ಇತಿಹಾಸದಲ್ಲಿ ಕರಾಳ ದಿನವಾಗಿ ದಾಖಲಾಗಿದೆ. ಪೌರತ್ವ ತಿದ್ದುಪಡಿ ಮಸೂದೆಗೆ ಸಂಸತ್ತಿನ ಎರಡೂ ಸದನಗಳಲ್ಲಿ ಅನುಮೋದನೆ ಸಿಕ್ಕಿದ್ದು, ಭಾರತದ ಬಹುತ್ವದ ಮೇಲೆ ಸಂಕುಚಿತ ಮನಸ್ಸಿನ ಮತ್ತು ಧರ್ಮಾಂಧ ಶಕ್ತಿಗಳಿಗೆ ದೊರೆತ ವಿಜಯ ಎಂದು ವರ್ಣಿಸಿದ್ದಾರೆ.
ಮಹಾತ್ಮ ಗಾಂಧಿಯವರ 150 ನೇ ಜನ್ಮದಿನವನ್ನು ದೇಶ ಮತ್ತು ಇಡೀ ಜಗತ್ತು ಆಚರಿಸುತ್ತಿರುವಾಗ ವಿವಾದಾತ್ಮಕ ಮಸೂದೆ ಅನುಮೋದನೆಯಾಗಿದ್ದು, ವಿಪರ್ಯಾಸ ಎಂದು ಅಭಿಪ್ರಾಯಪಟ್ಟಿದ್ದಾರೆ.
ಸಮಾನತೆ ಮತ್ತು ಧರ್ಮನಿರಪೇಕ್ಷತೆ ತತ್ವಗಳಿಗೆ ಮಾತ್ರ ಮಸೂದೆ ವಿರುದ್ಧವಾಗಿಲ್ಲ. ಸಂವಿಧಾನದಲ್ಲಿರುವ ಜಾತಿ, ಮತ, ಪ್ರಾಂತ್ಯ, ಭಾಷೆ, ಪಂಥ ಅಥವಾ ಜನಾಂಗೀಯ ಅಂಶಗಳಿಗೂ ವಿರುದ್ಧವಾಗಿದೆ. ಮಸೂದೆ ಅಂಗೀಕಾರವಾಗಿದ್ದು, ಸ್ವಾತಂತ್ರ್ಯ ಹೋರಾಟವನ್ನು ಅಣುಕಿಸುವಂತಿದ್ದು, ದೇಶದ ಆತ್ಮಕ್ಕಾದ ಗಾಯ ಎಂದು ಹೇಳಿದ್ದಾರೆ.
ತೀವ್ರ ವಿರೋಧದ ನಡುವೆ ರಾಜ್ಯ ಸಭೆಯಲ್ಲಿ ಬುಧವಾರ ಪೌರತ್ವ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆತಿದೆ. ಮಸೂದೆಗೆ ರಾಷ್ಟ್ರಪತಿಗಳ ಅನುಮೋದನೆ ದೊರೆತರೆ ದೇಶದಲ್ಲಿರುವ ಲಕ್ಷಾಂತರ ಮುಸ್ಲಿಮೇತರರಿಗೆ ಪೌರತ್ವ ದೊರೆಯಲಿದೆ.















ಇನ್ನಷ್ಟು ಸುದ್ದಿಗಳು
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನ ಹಾರಾಟ ರದ್ದು
ಚೀನಾದಲ್ಲಿ HMPV ವೈರಸ್ ವ್ಯಾಪಕ,ಆಸ್ಪತ್ರೆಗಳು ಫುಲ್: ಆತಂಕ ಬೇಡ- ಕೇಂದ್ರ ಸರ್ಕಾರ
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿ ಖಂಡನೀಯ: ತೆಲಂಗಾಣ ಸಿಎಂಗೆ ಎ ಪಿ ಉಸ್ತಾದ್ ಪತ್ರ
ಲಂಚ: ಮೇಘಾ ಇಂಜಿನಿಯರಿಂಗ್ ವಿರುದ್ಧ ಸಿಬಿಐ ಪ್ರಕರಣ – 966 ಕೋಟಿ ಮೌಲ್ಯದ ಎಲೆಕ್ಟೋರಲ್ ಬಾಂಡ್ಗಳನ್ನು ಖರೀದಿಸಿದ್ದ ಕಂಪನಿ ಮೇಘಾ
ಸಮಗ್ರ ಅಭಿವೃದ್ಧಿ ಗೆ ಅಂಬೇಡ್ಕರ್ ತತ್ವ ಪಾಲನೆ ಅಗತ್ಯ : ದ್ರೌಪದಿ ಮುರ್ಮು
ಹರಿಯಾಣ : ಶಾಲಾ ಬಸ್ ಪಲ್ಟಿ; ಆರು ಮಕ್ಕಳು ಸಾವು ಈದ್ ರಜೆಯಲ್ಲೂ ತೆರೆದಿದ್ದ ಶಾಲೆ!
ಭಜರಂಗದಳ ಮಾಜಿ ರಾಜ್ಯ ಸಂಚಾಲಕ ರಘು ಪರಾರಿ
ಮುಸ್ಲಿಂ 2ಬಿ ಮೀಸಲು ರದ್ಧತಿ ಮತಬ್ಯಾಂಕ್ ಭದ್ರಪಡಿಸುವ ಸರಕಾರದ ನಡೆ ಖಂಡನೀಯ- ಎಸ್ ವೈ ಎಸ್
ದೇವಸ್ಥಾನಕ್ಕೆ ಮಾಂಸ ಎಸೆದು, ಕೋಮುಗಲಭೆ- ಪ್ರಮುಖ ಆರೋಪಿ ಚಂಚಲ್ ತ್ರಿಪಾಠಿ ಬಂಧನ