ಕಲ್ಲಿಕೋಟೆ,ಡಿ.14: ಧರ್ಮದ ಹೆಸರಿನಲ್ಲಿ ಒಂದು ವಿಭಾಗಕ್ಕೆ ಮಾತ್ರ ಪೌರತ್ವವನ್ನು ನಿಷೇಧಿಸುವುದು ಸಂವಿಧಾನ ವಿರೋಧಿ ನಡೆಯಾಗಿದ್ದು, ಭಾರತದ ಜಾತ್ಯಾತೀತ ಪರಂಪರೆಯನ್ನು ನಿರಾಕರಿಸುವ ಕೃತ್ಯವಾಗಿದೆ ಎಂದು ಸಮಸ್ತ ಕೇರಳ ಜಂಇಯ್ಯತುಲ್ ಉಲಮಾದ ಅಧ್ಯಕ್ಷ ಸಯ್ಯದ್ ಜಿಫ್ರಿ ಮುತ್ತುಕೋಯ ತಂಙಳ್ ಹೇಳಿದ್ದಾರೆ.
ಕಲ್ಲಿಕೋಟೆಯಲ್ಲಿ ನಡೆದ ಸಮಸ್ತ ಪೌರತ್ವ ಸಂರಕ್ಷಣಾ ಮಹಾ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಸಮಾಜದಲ್ಲಿ ವರ್ಗೀಯ ಧ್ರುವೀಕರಣ ನಡೆಸಿ ಧರ್ಮದ ಹೆಸರಿನಲ್ಲಿ ದೇಶವನ್ನು ಒಡೆಯುವ ಪ್ರಯತ್ನವನ್ನು ಸಂವಿಧಾನ ಮತ್ತು ಜಾತ್ಯಾತೀತತೆಯ ಮೇಲೆ ನಂಬಿಕೆಯಿರಿಸುವ ಯಾವೊಬ್ಬ ಪ್ರಜೆಗೂ ಅಂಗಿಕರಿಸಲು ಸಾಧ್ಯವಿಲ್ಲ. ಭಾರತವು ಯಾವುದೇ ಧರ್ಮದ ಸ್ವತ್ತಲ್ಲ. ಅಂತಹ ಸನ್ನಿವೇಶವನ್ನು ಸೃಷ್ಟಿಸಲು ನಾವು ಅವಕಾಶ ನೀಡುವುದಿಲ್ಲ ಎಂದು ಅವರು ಜಿಫ್ರಿ ತಂಙಳ್ ಹೇಳಿದರು.
ಸಮಸ್ತ ಉಪಾಧ್ಯಕ್ಷ ಸೈಯದ್ ಹೈದರಲಿ ಶಿಹಾಬ್ ತಂಙಳ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯದರ್ಶಿ ಉಮರ್ ಮುಸ್ಲಿಯಾರ್ ಕೊಯ್ಯೋಡ್ ಪ್ರತಿಜ್ಞಾ ವಿಧಿ ಬೋಧಿಸಿದರು. ಕಲ್ಲಿಕೋಟೆ ಖಾಝಿ ಮುಹಮ್ಮದ್ ಜಮಲುಲ್ಲೈಲಿ ತಂಙಳ್ ದುವಾ ನೆರವೇರಿಸಿದರು.
ಕಾರ್ಯಕ್ರಮವನ್ನು ಎಂ.ಟಿ. ಅಬ್ದುಲ್ಲ ಮುಸ್ಲಿಯಾರ್ ಸ್ವಾಗತಿಸಿ, ಬಶೀರ್ ಫೈಝಿ ದೇಶಮಂಗಲ ವಂದಿಸಿದರು.















ಇನ್ನಷ್ಟು ಸುದ್ದಿಗಳು
ಚುನಾವಣಾ ಸಂಭ್ರಮಾಚರಣೆ: ಪಟಾಕಿ ಸಿಡಿದು ಮುಸ್ಲಿಂ ಲೀಗ್ ಕಾರ್ಯಕರ್ತ ಮೃತ್ಯು
ತಮ್ಮದೇ ಸರ್ಕಾರ ಮಂಡಿಸಿದ ಜಾತಿ ಸಮೀಕ್ಷೆ ವರದಿಯನ್ನು ಸುಟ್ಟು ಹಾಕಿದ ಕಾಂಗ್ರೆಸ್ ಎಂಎಲ್ಸಿ
ಕರ್ನಾಟಕ ಸರ್ಕಾರವನ್ನು ಬೀಳಿಸಲು ಕೇರಳ ದೇವಸ್ಥಾನದಲ್ಲಿ ಮೃಗ ಬಲಿ – ದೇವಸ್ವಂ ಸಚಿವರು ಹೇಳಿದ್ದೇನು?
ನೌಕರರ ಮಿಂಚಿನ ಮುಷ್ಕರ : ಅಂತಾರಾಷ್ಟ್ರೀಯ ವಿಮಾನಯಾನ ರದ್ದು
ಮಣಿಪುರ: ಚುನಾವಣೆ ಬಹಿಷ್ಕಾರ ಕ್ಕೆ ಕರೆ ಕೊಟ್ಟ ಕುಕಿ!!
ಬಡತನದಿಂದ ಬಳಲುತ್ತಿರುವ ಕುಟುಂಬದ ಮಹಿಳೆಯರ ಬ್ಯಾಂಕ್ ಖಾತೆಗೆ ವರ್ಷಕ್ಕೆ 1 ಲಕ್ಷ ರೂಪಾಯಿ
ಸಯ್ಯಿದ್ ಹಸನುಲ್ ಅಹ್ದಲ್ ತಂಙಳರಿಗೆ ಗೌರವ ‘ಅತ್ತಕ್ರೀಂ’- ಸ್ವಾಗತ ಸಮಿತಿ ಅಸ್ತಿತ್ವಕ್ಕೆ
ಪುಟ್ಟ ಬಾಲಕಿಯ ಅತ್ಯಾಚಾರ,ಹತ್ಯೆ ಪ್ರಕರಣ- ಆರೋಪಿ ಅಶ್ಫಾಕ್ ಆಲಂಗೆ ಮರಣ ದಂಡನೆ
ಕಳಮಶ್ಶೇರಿಯಲ್ಲಿ ಬಾಂಬ್ ಸ್ಫೋಟಿಸಿದ್ದು ಡೊಮಿನಿಕ್ ಮಾರ್ಟಿನ್- ದೃಢೀಕರಿಸಿದ ಪೊಲೀಸ್
ಕಳಮಶ್ಶೇರಿಯಲ್ಲಿ ಬಾಂಬ್ ಇಟ್ಟಿದ್ದು ನಾನೇ – ಪೊಲೀಸ್ ಠಾಣೆಯಲ್ಲಿ ಶರಣಾಗಿ ತಪ್ಪೊಪ್ಪಿಗೆ